ಮೈಸೂರು
ಸೂಪರ್ ಎಕ್ಸ್ ಪ್ರೆಸ್ ರೈಲು ಓಡಾಟದ ಪ್ರಯೋಗಿಕ ಹಂತವಾಗಿದ್ದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಯಾಣಿಕರಿಂದಲೂ ಸಕತ್ ಡಿಮಾಂಡ್ ಕೇಳಿ ಬರುತ್ತಿದೆ.
ಚೆನ್ನೈ-ಬೆಂಗಳೂರು-ಮೈಸೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸುತ್ತಿದೆ. ಇದು ಕರ್ನಾಟಕದ ಮೊದಲ ವಂದೇ ಭಾರತ್ ರೈಲಾಗಿದೆ. ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿಯೂ ರೈಲು ಸಂಚಾರ ಆರಂಭಿಸಲು ಈಗಾಗಲೇ ರೈಲ್ವೆ ಇಲಾಖೆ ಮುಂದಾಗಿದೆ. ಸದ್ಯ ಈ ರೈಲು ಕೈಗಾರಿಕಾ ಕೇಂದ್ರ ಚೆನ್ನೈ, ತಂತ್ರಜ್ಞಾನ ಮತ್ತು ಸ್ಟಾರ್ಟ್‌ಅಪ್ ಕೇಂದ್ರ ಬೆಂಗಳೂರು ಮತ್ತು ಪ್ರಸಿದ್ಧ ಪ್ರವಾಸಿ ನಗರವಾದ ಮೈಸೂರಿನ ನಡುವಿನ ಸಂಪರ್ಕ ಹೆಚ್ಚಿದ್ದು, ಪ್ರಯಾಣದ ಅವಧಿಯನ್ನೂ ಕಡಿಮೆ ಮಾಡಿದೆ.
ಬುಧವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನಗಳಲ್ಲೂ ಸಂಚರಿಸುವ ಈ ಐಷಾರಾಮಿ ರೈಲಿಗೆ ಆರಂಭದಲ್ಲಿ ನೀರಸ ಪ್ರತಿಕ್ರಿಯೆ ಇತ್ತು. ಆದರೆ, ಇದೀಗ ಸರಾಸರಿ ಶೇ.95 ರಷ್ಟು ಆಸನಗಳು ಭರ್ತಿಯಾಗುತ್ತಿವೆ ಎಂದು ನೈರುತ್ಯ ರೈಲ್ವೆ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ