ಕಾಂಗ್ರೆಸ್‌ ಕನಸು ನನಸಾಗುವುದಿಲ್ಲ : ರಾಜೀವ್‌ ಬಬ್ಬರ್

ಮೈಸೂರು:  

     ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಂಡಿದೆ’ ಎಂದು ಬಿಜೆಪಿ ದೆಹಲಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜೀವ್ ಬಬ್ಬರ್‌ ಹೇಳಿದರು.’ಕಾಂಗ್ರೆಸ್ ಏನೇ ಪ್ರಯತ್ನ ನಡೆಸಿದರೂ ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ.ಸಮೀಕ್ಷೆಗಳ ಪ್ರಕಾರ, ಬಿಜೆಪಿಗೆ ಹೆಚ್ಚಿನ ಒಲವು ಕಂಡುಬಂದಿದೆ’ ಎಂದರು.

     ‘ಅಧಿಕಾರಕ್ಕೆ ಬರಬೇಕೆನ್ನುವ ಕಾಂಗ್ರೆಸ್ ನಾಯಕರ ಕನಸನ್ನು ಜನರು ಈ ಬಾರಿಯೂ ನನಸು ಮಾಡುವುದಿಲ್ಲ. ಡಬಲ್ ಎಂಜಿನ್ ಸರ್ಕಾರ ನೀಡಿರುವ ಕೊಡುಗೆಗಳನ್ನು ಜನರು ನೆನೆಯುತ್ತಿದ್ದಾರೆ. ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ನಿರ್ಮಾಣದಿಂದ ನಗರದ ಅಭಿವೃದ್ಧಿ ಸಹಕಾರಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

     ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜೈಲಿಗೆ ಹೋಗಿ ಬಂದವರು. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಕಾಂಗ್ರೆಸ್‌ನ ಶೇ 50ರಷ್ಟು ನಾಯಕರು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದ್ದಾರೆ. ಹೀಗಿರುವಾಗ, ಪ್ರಿಯಾಂಕಾ ಗಾಂಧಿ ನಮ್ಮ ಸರ್ಕಾರದ ಬಗ್ಗೆ ಆರೋಪಿಸುವುದು ಸರಿಯೇ’ ಎಂದು ಕೇಳಿದರು.

     ‘ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ಕೊರತೆ ತಾಂಡವವಾಡುತ್ತಿದೆ. ಶಾಸಕರು ಜನರಿಂದ ದೂರ ಉಳಿದಿದ್ದಾರೆ. ಕೋವಿಡ್ ಸಮಯದಲ್ಲೂ ಜನರ ಸಂಕಷ್ಟಕ್ಕೆ ಯಾವುದೇ ರೀತಿಯಲ್ಲೂ ಸ್ಪಂದಿಸಲಿಲ್ಲ. ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲವಾಗಿದ್ದಾರೆ’ ಎಂದು ಆರೋಪಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap