ತುಮಕೂರು:
ರಾಜ್ಯದಲ್ಲಿ ನಡೆಯುತ್ತಿರುವ ಅಪಾರ ಪ್ರಮಾಣದ ಮಾದಕ ವಸ್ತುಗಳ ವಹಿವಾಟು ಮತ್ತು ಅವುಗಳ ತಯಾರಿಕೆ ನಿಲ್ಲಿಸುವುದು ಮತ್ತು ಅವುಗಳನ್ನು ವಶಪಡಿಸಿಕೊಂಡು ನಾಶ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಭಾನುವಾರ ತಿಳಿಸಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ 150 ಕೋಟಿಯಿಂದ 200 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಿಲೇವಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
‘ಕರ್ನಾಟಕದಲ್ಲಿ ಡ್ರಗ್ಸ್ ಹಾವಳಿಯನ್ನು ನಿಲ್ಲಿಸಬೇಕು ಎಂಬ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಅಲ್ಲೊಂದು ಇಲ್ಲೊಂದು ಡ್ರಗ್ಸ್ ವಶಪಡಿಸಿಕೊಳ್ಳುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಓದುತ್ತಲೇ ಇರುತ್ತೇನೆ. ಕಳೆದ ಒಂದೂವರೆ ತಿಂಗಳಲ್ಲಿ 150 ಕೋಟಿಯಿಂದ 200 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸುಟ್ಟು ಕರಕಲಾಗಿದೆ’ ಎಂದು ಕೊರಟಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪರಮೇಶ್ವರ ಹೇಳಿದರು.