ಬೆಂಗಳೂರು :
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಹೆಚ್ಚಾಗಿ ಆಗದಿದ್ದರೂ ಕೆಲವೆಡೆ ಸಾಧಾರಣ ಮಳೆಯಾಗಿದೆ. ಗೇರುಸೊಪ್ಪದಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಗರಿಷ್ಠ ತಾಪಮಾನವು ಕಾರವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಮಂಡ್ಯದಲ್ಲಿ ಕೂಡ ಹೆಚ್ಚಿದೆ. ಕಳೆದ 24 ಗಂಟೆಗಳಲ್ಲಿ ಆಗುಂಬೆಯಲ್ಲಿ ಗರಿಷ್ಠ ತಾಪಮಾನ 2.9 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ. ಗರಿಷ್ಠ ತಾಪಮಾನವು ಕರಾವಳಿಯಲ್ಲಿ 34-35 ಡಿಗ್ರಿ ಸೆಲ್ಸಿಯಸ್ನಷ್ಟಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ ಮತ್ತು ಹಾವೇರಿಯಲ್ಲಿ 32-34 ಡಿಗ್ರಿ ಸೆಲ್ಸಿಯಸ್, ವಿಜಯಪುರ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ 31-33 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಶಿವಮೊಗ್ಗದಲ್ಲಿ 34-35 ಡಿಗ್ರಿ ಸೆಲ್ಸಿಯಸ್ನಷ್ಟಿತ್ತು.
ಇನ್ನು ಕನಿಷ್ಠ ತಾಪಮಾನವು ಕರಾವಳಿಯಲ್ಲಿ 23-24 ಡಿಗ್ರಿ ಸೆಲ್ಸಿಯಸ್ನಷ್ಟಿತ್ತು, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ರಾಯಚೂರು, ಹಾವೇರಿ, ಬಾಗಲಕೋಟೆ, ಗದಗದಲ್ಲಿ 17-18 ಡಿಗ್ರಿ ಸೆಲ್ಸಿಯಸ್, ಕಲಬುರಗಿ, ಕೊಪ್ಪಳದಲ್ಲಿ 19-21 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ ಮತ್ತು ಮಡಿಕೇರಿಯಲ್ಲಿ 13-18 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ.
ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
