ನವದೆಹಲಿ:
ಮತದಾನದ ಅಂಕಿ-ಅಂಶಗಳ ಬಿಡುಗಡೆ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗವು (ECI) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಅಧಾರ ರಹಿತವಾಗಿದ್ದು, ಗೊಂದಲ ಸೃಷ್ಟಿಸುತ್ತದೆ. ನ್ಯಾಯಸಮ್ಮತ ಚುನಾವಣೆಗೆ ಅಡ್ಡಿಪಡಿಸುವಂತಿದೆ. ಆರೋಪಗಳು ಅಸಮರ್ಥನೀಯವಾಗಿದೆ, ಸತ್ಯಗಳಿಲ್ಲದ ಗೊಂದಲವನ್ನು ಹರಡುವ ಪಕ್ಷಪಾತ ಮತ್ತು ಉದ್ದೇಶಪೂರ್ವಕ ಪ್ರಯತ್ನವಾಗಿದೆ ಎಂದು ಆಯೋಗ ಖರ್ಗೆ ಹೇಳಿಕೆಯನ್ನು ಖಂಡಿಸಿದೆ.
ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷರು I.N.D.I.A ಬ್ಲಾಕ್ ನಾಯಕರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿಯೂ ಹಂಚಿಕೊಂಡಿದ್ದರು. ಚುನಾವಣಾ ಆಯೋಗವು ನಿಜವಾದ ಮತದಾನದ ಅಂಕಿ-ಅಂಶಗಳನ್ನು ಪ್ರಕಟಿಸಲು ನಿರಾಕರಿಸುವುದು, ಮತದಾನದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡುವುದು ಮತ್ತು ಮುಂದಿನ ಹಂತಗಳಿಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸದಿರುವುದು ಲೋಕಸಭೆ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಬಹುದು ಎಂದಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ