ಮಾರ್ಗಸೂಚಿ ಪ್ರಕಟಿಸಿದ ಚುನಾವಣಾ ಆಯೋಗ….!

ಬೆಂಗಳೂರು :

    ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಚುನಾವಣೆಗೆ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿದೆ.

    ಚುನಾವಣೆ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ, ಪಕ್ಷದ ಪರವಾಗಿ ಮತದಾರರ ಮೇಲೆ ಪ್ರವ ಬೀರುವ ಸುದ್ದಿ ಪ್ರಕಟಣೆ, ಬಿತ್ತರಣೆ ಮಾಡುವ ಮಾಧ್ಯಮ ಸಂಸ್ಥೆಗಳ ಮೇಲೆ ನಿಗಾ ವಹಿಸಲು ಎಂ.ಸಿ.ಎಂ.ಸಿ. ಸಮಿತಿ ರಚಿಸಿಲಾಗಿದೆ.ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಸೆಲ್ ಸಹ ರಚಿಸಲಾಗಿದೆ.

    ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕಿದೆ. ರಾಜಕೀಯ ಪಕ್ಷಗಳು ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ ವಾಹನ ಬಳಕೆಗಾಗಿ ಅನುಮತಿ ನೀಡಲು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ.

    ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಕುರಿತು ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಬೇಕು. ಅದೇರೀತಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆಯ ಕುರಿತು ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಯಾಗದಂತೆ ನಿಗಾವಹಿಸಬೇಕು ಎಂದು ಆಯಾ ಜಿಲ್ಲಾ ಚುನಾವಣಾಧಿಕಾರಗಳಿಗೆ ನಿರ್ದೇಶನ ನೀಡಲಾಗಿದೆ.

    ರಾಜಕೀಯ ಪಕ್ಷಗಳು ಅನುಮತಿಗಾಗಿ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು ಸುವಿಧಾ ಆಪ್ ಪರಿಚಯಿಸಿದ್ದು, ಈ ಆಪ್ ಮೂಲಕ ಅಥವಾ ಖುದ್ದಾಗಿ ಎಆರ್‌ಒ ಕಚೇರಿಗೆ ಭೇಟಿ ನೀಡಿ ಅನುಮತಿ ಪಡೆಯಬಹುದಾಗಿದೆ.

   ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು ಬಳಸಬೇಕು. ಚೆಕ್ ಪೆÇೀಸ್ಟ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಚಾಲ್ತಿಯಲ್ಲಿವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಕಂಟ್ರೋಲ್ ರೂಂ ಗಳ ಕಡೆಗೂ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap