ಮಂಡ್ಯ : ವಿವೇಕಾನಂದ ನಗರದ ಜನರಿಂದ ಮತದಾನ ಬಹಿಷ್ಕಾರ..

ಮಂಡ್ಯ

     ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಸಮಯದಲ್ಲಿ  ಮೂಲ ಸೌಕರ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡದ ಕಾರಣ ಹಲವು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಲಾಗಿದೆ. ಜನರ ಮನವೊಲಿಕೆಗೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಇದೇ ಪಟ್ಟಿಗೆ ಇನ್ನೊಂದು ಸೇರ್ಪಡೆ ಮಂಡ್ಯದ ವಿವೇಕಾನಂದ ಬಡಾವಣೆ.

      ವಿವೇಕಾನಂದ ಬಡಾವಣೆಗೆ ಜಿಲ್ಲಾಧಿಕಾರಿ ಡಾ. ಎಚ್. ಎನ್. ಗೋಪಾಲಕೃಷ್ಣ ಭೇಟಿ ನೀಡಿ ಮತದಾನ ಬಹಿಷ್ಕಾರ ನಿರ್ಧಾರ ಕೈಗೊಂಡಿದ್ದ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದರು. ಮೂಲಭೂತ ವ್ಯವಸ್ಥೆಗಳನ್ನು ‌ಒದಗಿಸುವ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

     ವಿವೇಕಾನಂದ ಬಡಾವಣೆ ಜನರು ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಘೋಷಣೆ ಮಾಡಿದ್ದರು. ಶನಿವಾರ ವಿವೇಕಾನಂದ ಬಡಾವಣೆ ಹಿತರಕ್ಷಣಾ ಸಮಿತಿ ಮುಖಂಡ ಕೀಲಾರ ಕೃಷ್ಣ ಮಾತನಾಡಿ, “ಕಳೆದ 20 ವರ್ಷಗಳಿಂದ ಬಡಾವಣೆಗೆ ಮೂಲಸೌಲಭ್ಯ ಒದಗಿಸಲು ನಡೆಸಿದ ಹೋರಾಟಕ್ಕೆ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ಮತದಾನ ಬಹಿಷ್ಕಾರ ಮಾಡಲು ತೀರ್ಮಾನಿಸಿದ್ದೇವೆ” ಎಂದು ಹೇಳಿದ್ದರು.

       ಬಡಾವಣೆಯಲ್ಲಿ ಕುಡಿಯುವ ನೀರು, ಚರಂಡಿ, ಯಜಿಡಿ, ರಸ್ತೆ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಚಿರತೆ, ನಾಯಿಗಳ ಹಾವಳಿ ಹೆಚ್ಚಾಗಿದೆ. ಕಸವನ್ನು ಸಂಗ್ರಹ ಮಾಡಲು ನಗರಸಭೆ ವಾಹನಗಳು ಬರುತ್ತಿಲ್ಲ. ಬಡಾವಣೆಯಲ್ಲಿನ ವಾಸ ನರಕಸದೃಶವಾಗಿದೆ ಎಂದು ವಿವೇಕಾನಂದ ಬಡಾವಣೆ ನಿವಾಸಿಗಳು ಆರೋಪ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap