ಪ್ರಜ್ವಲ್‌ ರೇವಣ್ಣ ಪ್ರಕರಣ : ಪ್ರಜ್ವಲ್‌ ಮಾಜಿ ಕಾರು ಚಾಲಕ ನಾಪತ್ತೆ…!

 ಹಾಸನ
 
    ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇಷ್ಟು ದಿನ ಅಶ್ಲೀಲ ವಿಡಿಯೋಗಳ ಬಗ್ಗೆ ಪೊಲೀಸ್ ತನಿಖೆ ಆಯಾಮದಲ್ಲಿ ಮಾತ್ರ ಸುದ್ದಿಯಾಗ್ತಿತ್ತು.
   ಇದೀಗ ಪೆನ್​ಡ್ರೈವ್  ಅಸಲಿ ಕಹಾನಿ ಶುರುವಾಗಿದೆ. ಪ್ರಜ್ವಲ್​​ ಅಶ್ಲೀಲ ವಿಡಿಯೋ ನೀಡಿದ್ದು ನಾನೇ ಎಂದು ಹೇಳಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್​ ಇದೀಗ ನಾಪತ್ತೆ ಆಗಿದ್ದಾರೆ. ಆ ಮೂಲಕ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿ ಕಾರ್ತಿಕ್, ಪ್ರಜ್ವಲ್ ಬಳಿ ಕಾರು ಚಾಲಕನಾಗಿ 13 ವರ್ಷ ಕೆಲಸ ಮಾಡಿದ್ದರು.​ 2 ದಿನದ ಹಿಂದೆ SIT ಮುಂದೆ ಹಾಜರಾಗೋದಾಗಿ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದರು.
   ಪೆನ್​​ಡ್ರೈವ್ ಬಗ್ಗೆ ಹೊಳೆನರಸೀಪುರ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿಕೆ ಬೆನ್ನಲ್ಲೇ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದೇವರಾಜೇಗೌಡ ಹೇಳಿಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಕಾರ್ತಿಕ್, ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಬಿಟ್ಟರೆ ಬೇರೆ ಯಾರಿಗೂ ವಿಡಿಯೋ, ಫೋಟೋಗಳನ್ನು ಹಂಚಿಕೊಂಡಿಲ್ಲ ಎಂದು ಹೇಳಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್​ಗೆ SIT ನೋಟಿಸ್ ಸಹ ನೀಡಿತ್ತು. ಆದರೆ ಇದೀಗ ಎಸ್ಕೇಪ್ ಆಗಿದ್ದಾರೆ.
    ಇನ್ನು ಕಾರ್ತಿಕ್ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾರ್ತಿಕ್ ಮಲೇಷಿಯಾಗೆ ಹೋಗಿದ್ದಾನೆ ಎಂದು ಹೇಳಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಹೆಚ್​ಡಿ ಕುಮಾರಸ್ವಾಮಿ, ಕಾರ್ತಿಕ್​ನನ್ನ ಮಲೆಷ್ಯಾಗೆ ಕಳಿಸಿದ್ಯಾರು ಎಂದು ಪ್ರಶ್ನಿಸಿದ್ದರು.
   ನಿನ್ನೆ ಡ್ರೈವರ್ ವಿಡಿಯೋ ರಿಲೀಸ್ ಮಾಡಿದ್ನಲ್ವಾ? ಆತ ಮಾತನಾಡಿರುವ ವಿಡಿಯೋ ಯಾರು ಮಾಡಿದ್ದು? ನಿನ್ನೆ ಅವನ‌ ಕೈಯಲ್ಲಿ ವಿಡಿಯೋ ಬಿಟ್ಟಿದ್ದರು, ಏನ್ ಹೇಳಿಕೆ ಕೊಟ್ಟಾ, ದೇವರಾಜ್ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದೆ ಅಂತಾ ಹೇಳಿದ್ದ. ಆದರೆ ಇಂದು ಬೆಳಗ್ಗೆ ಈ ಡಿಕೆ ಸಹೋದರರು ಕುಮಾರಸ್ವಾಮಿನೇ ಬಿಟ್ಟಿರಬೇಕು ಅಂತಾ ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.
   ಇನ್ನು ನಿನ್ನೆ ಬಿಜೆಪಿ ಸಮಾವೇಶಕ್ಕೆ ಆಗಮಿಸಿದ್ದ ಕೇಂದ್ರ ಗೃಹಸಚಿವ ಅಮಿತ್​ ಶಾ ಕೂಡ ಕಾಂಗ್ರೆಸ್​​ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಯಾಕೆ ಕ್ರಮಕೈಗೊಳ್ಳಲಿಲ್ಲ. ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದರು. ಇಂತಹ ಪ್ರಕರಣದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap