ಚೆನ್ನೈ :
ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.
ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು ಕಡೆಗೆ ಹೊರಟಿತ್ತು.ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಲಾಗಿದೆ.
ನೀಲಗಿರಿ ಅರಣ್ಯ ಪ್ರದೇಶದಲ್ಲಿ ಪತಕ್ಕೀಡಾದ ವೇಳೆ ಸೇನಾ ಹೆಲಿಕಾಪ್ಟರ್ ನಲ್ಲಿದ್ದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಈ ಹೆಲಿಕಾಪ್ಟರ್ ನಲ್ಲಿ 14 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ವಿಮಾನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಊಟಿಯಲ್ಲಿ ನಿಗದಿಯಾಗಿದ್ದ ಸಮಾರಂಭಕ್ಕೆ ತೆರಳುತ್ತಿದ್ದರು. ಬಿಪಿನ್ ರಾವತ್ ಪತ್ನಿ ಹಾಗೂ ಬ್ರಿಗೆಡಿಯರ್ ರಾಂಕ್‌ನ ಅಧಿಕಾರಿಗಳಿದ್ದರು.
ಮೂವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ನಾಲ್ಕು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಎಂಐ ಸೀರೀಸ್‌ನ ಹೆಲಿಕಾಪ್ಟರ್ ಇದಾಗಿತ್ತು.
ಸೇನೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕುರಿತು ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಐಎಎಫ್ ಎಂಐ-17ವಿ5 ಹೆಲಿಕಾಪ್ಟರ್ ಇದಾಗಿದೆ, ಹೆಲಿಕಾಪ್ಟರ್‌ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇರುವುದನ್ನು ಭಾರತೀಯ ಸೇನೆ ಖಚಿತಪಡಿಸಿದೆ. ಜತೆಗೆ ತನಿಖೆಗೆ ಆದೇಶಿಸಿದೆ.
ಹವಾಮಾನ ವೈಪರೀತ್ಯವೇ ಹೆಲಿಕಾಪ್ಟರ್ ಪತನಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ತಮಿಳುನಾಡಿನ ಕುನೂರ್‌ನಲ್ಲಿ ಘಟನೆ ನಡೆದಿದೆ. ಕೊಯಮತ್ತೂರು, ಸುಳೂರ್ ನಡುವೆ ಘಟನೆ ನಡೆದಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮಿಳುನಾಡಿಗೆ ಹೊರಟಿದ್ದಾರೆ. ಎರಡು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶೇ.80ರಷ್ಟು ಸುಟ್ಟುಹೋಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತರ ಗುರುತು ಪತ್ತೆ ಹಚ್ಚಲಾಗುತ್ತಿದೆ.
9 ಪ್ರಯಾಣಿಕರು ಹಾಗೂ 5 ಮಂದಿ ಸೇರಿ ಒಟ್ಟು 14 ಮಂದಿ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣೆ ಮಾಡಲಾಗಿದ್ದ ಮೂವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರು ಎನ್ನುವ ಮಾಹಿತಿ ಲಭ್ಯವಾಗಿದೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ









