ಉದ್ಘಾಟನೆಯಾದ 48 ಗಂಟೆಗಳಲ್ಲೇ ಕಿತ್ತು ಬಂದ ರಾಜ್ಯದ ಮೊಟ್ಟದ ಮೊದಲ ತೇಲುವ ಸೇತುವೆ: ಪ್ರವೇಶ ಬಂದ್!!

ಮಲ್ಪೆ:

ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ 48 ಗಂಟೆಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಇಲ್ಲಿ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್ ಮಾಡಲಾಗಿದೆ.ಉಡುಪಿಯ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಿಸಲು ಇತ್ತೀಚೆಗಷ್ಟೇ ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು.

ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಈ ತೇಲುವ ಸೇತುವೆ ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಿತ್ತುಕೊಂಡು ಬಂದಿದೆ. ಹೀಗಾಗಿ ತೇಲುವ ಸೇತುವೆ ಬಳಿ ಪ್ರವಾಸಿಗರ ಪ್ರವೇಶ ಬಂದ್ ಮಾಡಲಾಗಿದೆ. ಭಾನುವಾರ ಸಂಜೆಯಿಂದಲೇ ತೇಲುವ ಸೇತುವೆ ಬಂದ್ ಆಗಿದೆ.

ಬಹುನಿರೀಕ್ಷಿತ ಗಾಳಿಪಟ-2 ಚಿತ್ರ ಆಗಸ್ಟ್ 12ಕ್ಕೆ ಬಿಡುಗಡೆ

ಸೇತುವೆಗೆ ಅಳವಡಿಸಿರುವ ಬ್ಲಾಕ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಇದರ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಿರುವಾಗ ನಿರ್ವಹಣೆಯ ದೃಷ್ಟಿಯಿಂದ ತೇಲುವ ಸೇತುವೆ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ನಿರ್ವಾಹಕರು ಮಾಹಿತಿ ನೀಡಿದ್ದಾರೆ.

ಸೇತುವೆ ಕಿತ್ತು ಬರಲು ಭಾರಿ ಅಲೆಗಳು ಕಾರಣಇನ್ನು ತೇಲುವ ಸೇತುವೆಯನ್ನು ಫೋಂಟೋನ್ಸ್ ಬ್ಲಾಕ್ ಗಳಿಂದ ಮಾಡಲಾಗಿತ್ತು. ಈ ಬ್ಲಾಕ್ ಗಳು ಅಲೆಗಳ ಒತ್ತಡಕ್ಕೆ ಸಿಲುಕಿ ಕಿತ್ತು ಬಂದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ವಿಕ್ರಾಂತ್ ರೋಣ’ ಪ್ಯಾನ್ ಇಂಡಿಯಾ ಅಲ್ಲ, ಪ್ಯಾನ್ ವರ್ಲ್ಡ್ ಸಿನಿಮಾ!

ಪ್ರವಾಸಿಗರ ಆಕರ್ಷಿಸಿದ್ದ ತೇಲು ಸೇತುವೆ

ಈ ತೇಲುವ ಸೇತುವೆ ಚಾಲನೆಗೊಂಡ ಬೆನ್ನಲ್ಲೇ ಭಾರೀ ಸದ್ದು ಮಾಡಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸಿತ್ತು. ಕೇರಳದ ಬೇಪೋರ್ ಬೀಚ್  ಬಿಟ್ಟರೆ ದೇಶದ ಬೇರೆಲ್ಲೂ ಈ ರೀತಿಯ ತೇಲುವ ಸೇತುವೆ ಇರಲಿಲ್ಲ. ಕೆಲವೊಂದು ಹಿನ್ನೀರಿನ ಪ್ರದೇಶಗಳಲ್ಲಿ ಈ ಥರದ ಸೇತುವೆ ಅಳವಡಿಸಿದ್ದರೂ ಸಮುದ್ರದ ಅಲೆಗಳ ಮೇಲೆ ನಡೆದ ರೋಚಕ ಅನುಭವ ಅಲ್ಲಿ ಸಿಗುವುದಿಲ್ಲ. ಇನ್ನು ಮಲ್ಪೆಯಲ್ಲಿ ನಿರ್ಮಾಣವಾದ ಈ ಸೇತುವೆಯು 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲ ಹೊಂದಿದೆ. ಹೆಚ್ಚಿನ ಸಾಂದ್ರತೆಯ ಫೋಂಟೋನ್ಸ್ ಬ್ಲಾಕ್ ಗಳಿಂದ ಇದನ್ನು ಮಾಡಲಾಗಿತ್ತು. ಇದರಲ್ಲಿ ಒಂದು ಬಾರಿಗೆ ನೂರು ಜನರು ಸಾಗಬಹುದಿತ್ತು.

ಸೇತುವೆಯ ಕೊನೆಯಲ್ಲಿ ಸಮುದ್ರಕ್ಕೆ ಚಾಚಿರುವ 12 ಮೀಟರ್ ಉದ್ದ 7.5 ಮೀಟರ್ ಅಗಲದ ವೇದಿಕೆ ಇದ್ದು, ಒಬ್ಬರು ನೂರು ರೂಪಾಯಿ ಪಾವತಿಸಿ, 15 ನಿಮಿಷ ಕಾಲ ಸೇತುವೆ ಮೇಲೆ ಕಳೆಯಲು ಅವಕಾಶ ಕಲ್ಪಿಸಲಾಗಿತ್ತು. ಸೇತುವೆ ಅಕ್ಕಪಕ್ಕದಲ್ಲಿ ಹತ್ತುಮಂದಿ ಲೈಫ್ರ್ಡು ಗಾರ್ಡ್ ಗಳು ಇರುತ್ತಾರೆ. ಸ್ಥಳೀಯರ ನೆರವಿನೊಂದಿಗೆ ಈ ತೇಲುವೆ ಸೇತುವೆಯನ್ನು ನಿರ್ಮಾಣ ಮಾಡಿದ್ದು ಸಮುದ್ರದ ಅಲೆಗಳ ಉಬ್ಬರ ಇಳಿತಕ್ಕೆ ಹೊಂದಿಕೊಂಡು ಮೋಜುಮಸ್ತಿ ಮಾಡುವುದು ಪ್ರವಾಸಿಗರಿಗೆ ಅಪೂರ್ವ ಅನುಭವ ನೀಡಿತ್ತು.

ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ ; ಕ್ಷಮೆ ಕೇಳಿದ ಅನುಶ್ರೀ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap