ಕಾಂತಾರ ಚಿತ್ರೀಕರಣ: ಅರಣ್ಯ ಅಧಿಕಾರಿಗಳ ಪರಿಶೀಲನೆ

ಬೆಂಗಳೂರು:

    ಅರಣ್ಯ ಪ್ರದೇಶದಲ್ಲಿ  ನಡೆಯುತ್ತಿರುವ ‘ಕಾಂತಾರ- ಚಾಪ್ಟರ್‌ 1’ ಚಿತ್ರೀಕರಣ  ಪ್ರದೇಶಕ್ಕೆ ಅರಣ್ಯ ಅಧಿಕಾರಿಗಳು ದಿಡೀರ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಂತಾರ ಚಿತ್ರತಂಡದಿಂದ  ಅರಣ್ಯ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪರಿಶೀಲನೆ ನಡೆದಿದೆ.

    ರಿಷಬ್ ಶೆಟ್ಟಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಕಾಂತಾರ ಚಿತ್ರದ ಪ್ರೀಕ್ವೆಲ್ ನಿರ್ಮಾಣವಾಗುತ್ತಿದ್ದು, ಅದಕ್ಕಾಗಿ ರಿಷಬ್ ಶೆಟ್ಟಿ ಅರಣ್ಯ ಪ್ರದೇಶದಲ್ಲಿ ಭರ್ಜರಿ ಸೆಟ್ ಹಾಕಿ ಚಿತ್ರೀಕರಣ ನಡೆಸುತ್ತಿದ್ದಾರೆ. ಹೆರೂರು ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿನ ಗೋಮಾಳ ಜಾಗದಲ್ಲಿ ಶೂಟಿಂಗ್‌ ಮಾಡಲು ಕಾಂತಾರ ಚಿತ್ರತಂಡ, ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿದೆ.

   ಕಾಂತಾರ ಚಿತ್ರದ ಸೆಟ್‌ಗೆ ನಿನ್ನೆ ಅರಣ್ಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿತ್ತು. ಹೀಗಾಗಿ ಅಧಿಕಾರಿಗಳು ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಕಾಡಿಗೆ ಯಾವುದೇ ಹಾನಿ ಆದರೆ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

   ಕಾಂತಾರ ಚಿತ್ರೀಕರಣಕ್ಕೆ ವಿವಾದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಸಿನಿಮಾ ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ. ನಮ್ಮ ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ, ಕಂದಾಯ ಜಮೀನಿನಲ್ಲಿ ಮಾಡಿದ್ದಾರೆ. ಕಾಂತಾರ ಚಿತ್ರತಂಡ ಷರತ್ತುಗಳನ್ನು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದರು.

Recent Articles

spot_img

Related Stories

Share via
Copy link