ತಪ್ಪಿದ ಸಚಿವ ಸ್ಥಾನ : ನಿಘೂಢವಾದ ಹರಿಪ್ರಸಾದ್‌ ನಡೆ…!

ಬೆಂಗಳೂರು:

     ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

    16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ. ಪಕ್ಷದ ಕೆಲವರ ನಡೆಯಿಂದ ಅಸಮಾಧಾನಗೊಂಡು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

     ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಕರಾವಳಿಯಲ್ಲಿ ಬಿಲ್ಲವ ಸಮುದಾಯ ದೊಡ್ಡ ಮಟ್ಟದಲ್ಲಿ ಇರುವುದಿಂದ ಈ ಭಾಗದವರಾಗಿರುವ ಬಿ.ಕೆ ಹರಿ ಪ್ರಸಾದ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇತ್ತು.

     ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಕಾಂಗ್ರೆಸ್ ನಾಯಕತ್ವ ಭರವಸೆ ನೀಡಿತ್ತು. ಅದರಂತೆ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಯಾರೇ ಸಚಿವರಾಗಿದ್ದರೂ ಉಭಯ ಸದನಗಳ ಒಂದರಲ್ಲಿ ಸದಸ್ಯರಾಗಿರಬೇಕು ಎಂಬುದು ನಿಯಮ.  ಹೀಗಾಗಿ ಬೋಸರಾಜು ಎಂಎಲ್‌ಸಿಯಾಗಿ ಆಯ್ಕೆಯಾಗಲು ಆರು ತಿಂಗಳ ಕಾಲಾವಕಾಶವಿದೆ.
     ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಮುಖ್ಯ ಸಚೇತಕ ಪ್ರಕಾಶ್‌ ರಾಥೋಡ್‌ ಅವರಂತ ಹಲವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು, ಆದರೆ ಹಿರಿಯ ನಾಯಕರಲ್ಲಿ ಯಾರೊಬ್ಬರಿಗೂ ಸ್ಥಾನ ಸಿಗದ ಕಾರಣ ಕಾಂಗ್ರೆಸ್‌ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap