ಕೋರ್ಟ್‌ ಆವರಣದಲ್ಲೇ ಪತ್ನಿ, ಅತ್ತೆಗೆ ಮಚ್ಚಿನಿಂದ ಕೊಚ್ಚಿದ ಪತಿ

ಬೆಳಗಾವಿ:

    ಬೆಳಗಾವಿಯಲ್ಲಿ  ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ  ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ.

    ಮಚ್ಚಿನಿಂದ ಪತ್ನಿ ಐಶ್ವರ್ಯ ಹಾಗೂ ಅತ್ತೆ ಅನಸೂಯ ಮೇಲೆ ಮುತ್ತಪ್ಪ ಗಣಾಚಾರಿ ಹಲ್ಲೆ ಮಾಡಿ ಕೊಲ್ಲಲು ಯತ್ನಿಸಿದ್ದಾನೆ. ತಕ್ಷಣವೇ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚ್ಛೇದನ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಕೋರ್ಟಿಗೆ ಹಾಜರಾಗಿದ್ದರು. ಆರೋಪಿ ಮುತ್ತಪ್ಪ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದು, ಐಶ್ವರ್ಯ ಮತ್ತು ಅನಸೂಯಾಗೆ ಸದ್ಯ ಧಾರವಾಡದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Recent Articles

spot_img

Related Stories

Share via
Copy link