ಆದರೆ ಇತ್ತೀಚಿನ ದಿನಗಳಲ್ಲಿ ಬಹುತೇಕ ಪ್ರಕರಣಗಳಲ್ಲಿ ತನಿಖಾಧಿಕಾರಿಗಳಿಗೆ ದೂರುದಾರರಿಗೆ ಮಾಹಿತಿಯನ್ನು ನೀಡುವುದೇ ಇಲ್ಲ. ಹಲವು ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಆರೋಪಿಗಳ ಜತೆ ಶಾಮೀಲಾಗಿ ಅಂತಿಮ ವರದಿಗಳ ಬಗ್ಗೆ ಮಾಹಿತಿಯನ್ನು ನೀಡದ ಹಿನ್ನೆಲೆಯಲ್ಲಿ ಎಷ್ಟೋ ಪ್ರಕರಣಗಳು ಹಳಿ ತಪ್ಪಿದ್ಟುಂಟು. ಬೆಂಗಳೂರಿನ ಬಿ. ಪ್ರಶಾಂತ್ ಹೆಗ್ಡೆ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಈ ಪ್ರಕರಣದಲ್ಲಿ ತನಿಖಾಧಿಕಾರಿ ಅಂತಿಮ ವರದಿಯನ್ನು ಕೋರ್ಟ್‌ಗೆ ಸಲ್ಲಿಸುವ ಬಗ್ಗೆ ದೂರುದಾರರಿಗೆ ಯಾವುದೇ ಮಾಹಿತಿ ನೀಡಿಲ್ಲ. ಹಾಗಾಗಿ ಇದು ಸಿಆರ್‌ಪಿಸಿ ಸೆಕ್ಷನ್ 173(2) ಉಲ್ಲಂಘನೆಯಾಗಿದೆ ಎಂದು ನ್ಯಾಯಪೀಠ ಹೇಳಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರಕರಣದಲ್ಲಿ ಆರೋಪಿಗಳು ಬ್ಯಾಂಕ್ ಉದ್ಯೋಗಿಗಳು, ಆದರೆ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದ್ದು, ಬ್ಯಾಂಕ್ ಅನ್ನು ಆರೋಪಿಯನ್ನಾಗಿ ಮಾಡಿಲ್ಲ. ಹಾಗಾಗಿ ಬ್ಯಾಂಕ್ ಆರೋಪಿಯನ್ನಾಗಿ ಮಾಡುವ ಸಂಬಂಧ ಸೆಕ್ಷನ್ 173(8)ರಡಿ ಹೆಚ್ಚುವರಿ ಆರೋಪ ಪಟ್ಟಿಯನ್ನು ಸಲ್ಲಿಸಬಹುದು ಎಂದು ಆದೇಶಿಸಿದೆ. ಅಧೀನ ನ್ಯಾಯಾಲಯ ಕೂಡ ಸಿಆರ್‌ಪಿಸಿ ಸೆಕ್ಷನ್ 319 ಅನ್ನು ಅನ್ವಯಿಸಿ ಬ್ಯಾಂಕ್ ಅನ್ನು ಹೆಚ್ಚುವರಿ ಆರೋಪಿ ಎಂದು ಸೇರಿಸಬಹುದು ಅಥವಾ ಬ್ಯಾಂಕ್ ಅನ್ನು ಪ್ರತಿವಾದಿಯನ್ನಾಗಿ ಮಾಡಬಹುದು ಎಂದು ನ್ಯಾಯಾಲಯ ಆದೇಶಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ