ತುಮಕೂರು:
ಪುರುಷ ಕಾರ್ಮಿಕರಿಗೂ ಸ್ತನ ಕ್ಯಾನ್ಸರ್ ಪರೀಕ್ಷೆ ನಡೆಸಿರುವುದಾಗಿ ಬಿಲ್ ಸೃಷ್ಟಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದಿರುವುದು ಬೆಳಕಿಗೆ ಬಂದಿತ್ತು.
ಪೌರ ಕಾರ್ಮಿಕರ ಸಮಗ್ರ ಆರೋಗ್ಯ ತಪಾಸಣೆಯಲ್ಲಿ ನಡೆದಿದ್ದ ಅಕ್ರಮ ಪ್ರಕರಣದ ತನಿಖೆಯಲ್ಲಿ ಮುಖ್ಯ ಆರೋಪಿಯೇ ತನಿಖಾಧಿಕಾರಿ ಆಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ತನಿಖೆಗೆ ತಂಡ ರಚಿಸಿದೆ. ಪ್ರಕರಣದ ಮುಖ್ಯ ಆರೋಪಿಯಾಗಿರುವ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಕೆ.ಆಶಾ ಎಂಬುವರನ್ನೇ ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಆರೋಪಿ ಆಶಾ, ತನಿಖಾ ತಂಡದಲ್ಲಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ತನಿಖೆ ಎಷ್ಟು ಪ್ರಾಮಾಣಿಕವಾಗಿ ನಡೆಯುತ್ತದೆ? ಇದು ಕಳ್ಳರ ಕೈಗೆ ಮನೆ ಬೀಗ ಕೊಟ್ಟಂತಾಗಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ