ಜ್ಞಾನವ್ಯಾಪಿ ಮಸೀದಿ ಅರ್ಜಿ ವಜಾಗೊಳಿಸಿದ ವಾರಣಾಸಿ ನ್ಯಾಯಲಯ

ವಾರಣಾಸಿ

    ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

    ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಜಿಲ್ಲಾ ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಅವರು, ಸಮೀಕ್ಷೆಗೆ ಈಗಾಗಲೇ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಒಪ್ಪಿಗೆ ಸಿಕ್ಕಿದೆ ಎಂದು ಕೋರ್ಟ್ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು, ನ್ಯಾಯಾಲಯ ಈ ವಿಚಾರದಲ್ಲಿ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

    17ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.

    ಎಎಸ್‌ಐ ಸಮೀಕ್ಷೆಯನ್ನು ನಿಯಮಗಳಿಗೆ ವಿರುದ್ಧವಾಗಿ ನಡೆಸಲಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಮಸೀದಿ ಆಡಳಿತ ಸಮಿತಿಯು ಜಿಲ್ಲಾ ನ್ಯಾಯಾಲಯದ ಮುಂದೆ ವಾದಿಸಿದೆ ಎಂದು ಮಿಶ್ರಾ ಅವರು ತಿಳಿಸಿದ್ದಾರೆ. ಅರ್ಜಿದಾರರಿಗೆ ಯಾವುದೇ ಹೊಸ ಷರತ್ತುಗಳನ್ನು ವಿಧಿಸುವಂತಿಲ್ಲ ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link