ನವದೆಹಲಿ:
ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಮೇ 30ರವರೆಗೆ ವಿಸ್ತರಿಸಿದೆ.
ದೆಹಲಿ ಸರ್ಕಾರವು 2021ರ ನವೆಂಬರ್ 17 ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತು. ಆದರೆ, ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022 ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಯನ್ನು ಪ್ರಾರಂಭವಾಯಿತು. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಪ್ರಧಾನ ಆರೋಪಿಗಳಲ್ಲಿ ಒಬ್ಬರೆಂದು ಪಟ್ಟಿ ಮಾಡಲಾಗಿದೆ.
ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಹಿಂದಿನ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ.