ಬೆಂಗಳೂರು:
ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಒಂದು ವಾರದಲ್ಲಿ ಅಂತಿಮವಾಗಲಿದೆ ಎಂದು ಬಿಜೆಪಿ ರಾಜಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಹೇಳಿದರು.
ನಂತರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲೆಯ ಸಂಡೂರು, ಸಿರುಗುಪ್ಪ, ಕಂಪ್ಲಿ, ಬಳ್ಳಾರಿ ಗ್ರಾಮೀಣ ಮತ್ತು ಬಳ್ಳಾರಿ ನಗರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಅಭಿಪ್ರಾಯ ಸಂಗ್ರಹ ಸಭೆ ನಡೆಸಲಾಯಿತು. ಈಗಾಗಲೇ ಕಾಂಗ್ರೇಸ್ ಮತ್ತು ಜೆಡಿಎಸ್ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಮೇ 10 ರಂದು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ನಡೆದು ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
