ಬಹುನಿರೀಕ್ಷಿತ ಗಾಳಿಪಟ-2 ಚಿತ್ರ ಆಗಸ್ಟ್ 12ಕ್ಕೆ ಬಿಡುಗಡೆ

ಗಾಳಿಪಟ-2 :

ನಿರ್ದೇಶಕ ಯೋಗರಾಜ್‌ ಭಟ್‌ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್‌ ಕಾಂಬಿನೇಶನ್‌ನಲ್ಲಿ ತಯಾರಾಗಿರುವ ಬಹುನಿರೀಕ್ಷಿತ ‘ಗಾಳಿಪಟ-2′ ಚಿತ್ರ ಆಗಸ್ಟ್ 12ಕ್ಕೆ ಬಿಡುಗಡೆಯಾಗಲಿದೆ.ಚಿತ್ರತಂಡ ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದು ಆಗಸ್ಟ್‌ 12ಕ್ಕೆ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದೆ.

ಈ ಹಿಂದೆ ಚಿತ್ರ ತಂಡ ಚಿತ್ರವನ್ನು ಜೂನ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿತ್ತು. ಆದರೆ, ಮಳೆಗಾಲ ಹಿನ್ನೆಲೆಯಲ್ಲಿ ಚಿತ್ರ ನಿರ್ಧಾರವನ್ನು ಕೈಬಿಟ್ಟಿತ್ತು. ಇದರಂತೆ ಶನಿವಾರ ಅಧಿಕೃತವಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ತಿಳಿಸಿದೆ.ನಟ ಗಣೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ, ಗೆಟ್ ರೆಡಿ ಟು ಫ್ಲೈ ಆನ್ ಆಗಸ್ಟ್ 12. ಮಾರ್ಕ್ ದ ಡೇಟ್ ಎಂದು ಹೇಳಿದ್ದಾರೆ.

‘ವಿಕ್ರಾಂತ್ ರೋಣ’ ಪ್ಯಾನ್ ಇಂಡಿಯಾ ಅಲ್ಲ, ಪ್ಯಾನ್ ವರ್ಲ್ಡ್ ಸಿನಿಮಾ!

ಯೋಗರಾಜ್ ಭಟ್‌ ಹಾಗೂ ಗಣೇಶ್‌ ಕಾಂಬಿನೇಶನ್‌ನಲ್ಲಿ ಈ ಹಿಂದೆ ಬಿಡುಗಡೆಯಾಗಿದ್ದ ‘ಗಾಳಿಪಟ’ ಚಿತ್ರ ಹಿಟ್‌ ಆಗಿತ್ತು. ಈಗ ಅದೇ ಜೋಡಿ ಮತ್ತೂಮ್ಮೆ ಜೊತೆಯಾಗಿ ‘ಗಾಳಿಪಟ-2′ ಮಾಡಿದ್ದಾರೆ. ಈ ಚಿತ್ರವನ್ನು ಸೂರಜ್‌ ಪ್ರೊಡಕ್ಷನ್ಸ್‌ನಡಿ ರಮೇಶ್‌ ರೆಡ್ಡಿ ನಿರ್ಮಾಣ ಮಾಡಿದ್ದು, ಚಿತ್ರ ಅದ್ಧೂರಿಯಾಗಿ ಮೂಡಿಬಂದಿದೆ ಎನ್ನಲಾಗಿದೆ.ಚಿತ್ರದಲ್ಲಿ ಗಣೇಶ್‌, ದಿಗಂತ್‌ ಹಾಗೂ ಪವನ್‌ ಕುಮಾರ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಸಂಯುಕ್ತಾ, ನಿಶ್ವಿ‌ಕಾ ನಾಯ್ಡು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಅನಂತ್‌ ನಾಗ್‌ ಕೂಡಾ ಚಿತ್ರದಲ್ಲಿ ನಟಿಸಿದ್ದಾರೆ.

ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ ; ಕ್ಷಮೆ ಕೇಳಿದ ಅನುಶ್ರೀ

ರಮೇಶ್ ರೆಡ್ಡಿ ಅವರ ಸೂರಜ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕುಗಳನ್ನು ಕ್ರಮವಾಗಿ ಜೀ ಕನ್ನಡ ಮತ್ತು ಜೀ 5 ಗೆ ಭಾರಿ ಮೊತ್ತಕ್ಕೆ ಮಾರಾಟ ಮಾಡಲಾಗಿದೆ.ಈ ಮಧ್ಯೆ ಗಣೇಶ್ ಟ್ರಿಬಲ್ ರೈಡಿಂಗ್ ಚಿತ್ರವೂ ಬಿಡುಗಡೆಗೆ ಸಿದ್ಧವಾಗಿದೆ. ರುಕ್ಮಿಣಿ ವಸಂತ್ ಮತ್ತು ರೀಷ್ಮಾ ನಾಣಯ್ಯ ನಟಿಸಿರುವ ಪ್ರೀತಂ ಗುಬ್ಬಿ ಅವರ ಬಾಣದಾರಿಯಲ್ಲಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲು ಗಣೇಶ್ ಸಿದ್ಧತೆ ನಡೆಸುತ್ತಿದ್ದಾರೆ.

ಹಿಂದಿಯಲ್ಲಿ 400 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ವಿಶ್ವಾದ್ಯಂತ ಯಶ್​ ಚಿತ್ರ ಗಳಿಸಿದ್ದು 1100 ಪ್ಲಸ್​ ಕೋಟಿ

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link