ತುಮಕೂರು: ಮಧು ಬಂಗಾರಪ್ಪ ಕಾರು ಅಪಘಾತ….!

ತುಮಕೂರು:

     ಸಚಿವ ಮಧು ಬಂಗಾರಪ್ಪ ಇದ್ದ ಕಾರಿಗೆ ಲಾರಿ ಡಿಕ್ಕಿಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ .ಬುಧವಾರ ತಡರಾತ್ರಿ ಅಪಘಾತ ನಡೆದಿದ್ದು, ಸ್ಪಲ್ಪದರಲ್ಲೆ ಭಾರಿ ದುರಂತ ತಪ್ಪಿದೆ.ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

    ಬೆಂಗಳೂರು ಕಡೆಗೆ ಹೋಗುತ್ತಿದ್ದ ಸಚಿವ ಮಧು ಬಂಗಾರಪ್ಪ ಕಾರು ಅಪಘಾತವಾಗಿದೆ. ಲಾರಿಯೊಂದು ಕಾರನ್ನು ಉಜ್ಜಿಕೊಂಡು ಹೋಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದ್ದು, ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.ಅಪಘಾತದ ಬಳಿಕ ಬೇರೆ ಕಾರಿನಲ್ಲಿ ಸಚಿವ ಮಧು ಬಂಗಾರಪ್ಪ ಬೇರೆ ಕಾರಿನಲ್ಲಿ ತೆರಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ