ಹೊಸ ತರಬೇತಿ ವಾಹನಗಳಿಗೆ ಚಾಲನೆ ನೀಡಿದ ಸಚಿವರು….!

ಬೆಂಗಳೂರು:

      ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸುಮಾರು 9,000 ಸಿಬ್ಬಂದಿಗಳನ್ನು ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಹೇಳಿದರು.

     ಬಿಎಂಟಿಸಿಯ 50 ಹೊಸ ಬೊಲೆರೊ ಜೀಪ್‌ಗಳು ಮತ್ತು ತರಬೇತಿ ವಾಹನಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿಯಲ್ಲಿ 3,745 ಚಾಲನಾ ಸಿಬ್ಬಂದಿಗಳು ಹಾಗೂ 726 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಈಗಾಗಲೇ ಕರೆಯಲಾಗಿದ್ದು, ಜಾಹೀರಾತು ಪ್ರಕ್ರಿಯೆಯನ್ನು ಮುಂದುವರೆಸಿ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಜೊತೆಗೆ ಹೊಸದಾಗಿ 1,433 ಚಾಲನಾ ಸಿಬ್ಬಂದಿಗಳ ಮತ್ತು 2,738 ತಾಂತ್ರಿಕ ಸಿಬ್ಬಂದಿಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಸರ್ಕಾರದಿಂದ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

 

     ಇದಲ್ಲದೆ, ನಿಗಮಗಳಿಗೆ 4,000 ಬಸ್‌ಗಳನ್ನು ಖರೀದಿಸಲಾಗುವುದು. ಸಾರಿಗೆ ನಿಗಮಗಳು ಪ್ರಸ್ತುತ 24,000 ಬಸ್‌ಗಳನ್ನು ಹೊಂದಿದ್ದು, ಜನಸಂಖ್ಯೆ ಅನುಗುಣವಾಗಿ ಇನ್ನೂ 10,000 ರಿಂದ 12,000 ಬಸ್‌ಗಳ ಅಗತ್ಯವಿದೆ. ಕೆಕೆಆರ್‌ಟಿಸಿಗೆ 150 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ 706 ಬಸ್‌ಗಳನ್ನು ಖರೀದಿಸಲು ಚಿಂತನೆ ನಡೆಸಲಾಗಿದ್ದು, ಎನ್‌ಡಬ್ಲ್ಯುಕೆಆರ್‌ಟಿಸಿಗೆ ಜಿಸಿಸಿ ಆಧಾರದ ಮೇಲೆ 450 ಎಲೆಕ್ಟ್ರಿಕ್ ಬಸ್‌ಗಳನ್ನು ಖರೀದಿಸಲು ಟೆಂಡರ್ ಆಹ್ವಾನಿಸಲು ಅನುಮತಿ ನೀಡಲಾಗಿದೆ, ಇದಕ್ಕಾಗಿ 24 ಇತರೆ ಬಸ್‌ಗಳನ್ನು ಖರೀದಿಸಲಾಗುತ್ತದೆ.

     “ಪ್ರೀಮಿಯರ್ ಕೋಚ್‌ಗಳ ಹೆಚ್ಚುವರಿ ಅವಶ್ಯಕತೆಗಳನ್ನು ಪೂರೈಸಲು ಮತ್ತು ಖಾಸಗಿ ನಿರ್ವಾಹಕರಿಗೆ ಪೈಪೋಟಿ ನೀಡಲು, 44 ನಾನ್ ಎಸಿ ಸ್ಲೀಪರ್ ಬಸ್‌ಗಳು ಮತ್ತು 4 ಎಸಿ ಸ್ಲೀಪರ್ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಫ್ಲೀಟ್‌ಗೆ ಸೇರ್ಪಡೆಗೊಳಿಸಲಾಗುವುದು ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap