ವಾಲ್ಮಿಕಿ ಹಗರಣ : ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ ….!

ಬೆಂಗಳೂರು:

   ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ. ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

   ವಾಲ್ಮೀಕಿ ನಿಗಮದಿಂದ ಹಲವಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್‌ ಖಾತೆಗಳಿಗೆ   ಹಣ ವರ್ಗಾವಣೆಯಾಗಿದೆ. ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಗೇಂದ್ರ ಅವರ ಬ್ಯಾಂಕ್‌ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  ಕಳೆದ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿ ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಅವರನ್ನು ಬಂಧಿಸಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap