ನವದೆಹಲಿ :
ಜಮ್ಮು ಮತ್ತು ಕಾಶ್ಮೀರ ದ ಪಹಲ್ಗಾಮ್ ನಲ್ಲಿ ಪಾಕ್ ಉಗ್ರರು 26 ಭಾರತೀಯ ನಾಗರೀಕರನ್ನು ಹತ್ಯೆ ಮಾಡಿದ್ದು, ಇದೀಗ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಹೌದು, ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ 9 ಪ್ರದೇಶಗಳ ಮೇಲೆ ವಾಯು ದಾಳಿ ನಡೆಸಿ ಪಾಕಿಸ್ತಾನದ ವಿರುದ್ದ ಸೇಡು ತೀರಿಸಿಕೊಂಡಿದೆ. ಆದರೆ ಇತ್ತ ಪಾಕ್ ಭಾರತದ ದಾಳಿಯಿಂದ ನಲುಗಿ ಹೋಗಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಅಲ್ಲಿ ಜನ ಜೀವನವು ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಪಾಕಿಸ್ತಾನಿ ಸುದ್ದಿನಿರೂಪಕಿ ಲೈವ್ ನಲ್ಲಿ ಅಳುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.
ಈ ವಿಡಿಯೋವನ್ನು @RichKettle07 ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ವೈರಲ್ ಆಗಿರುವ ವಿಡಿಯೋ ದಲ್ಲಿ ಪಾಕಿಸ್ತಾನಿ ಸುದ್ದಿ ನಿರೂಪಕಿ ಲೈವ್ ನಲ್ಲಿ ಅಳುತ್ತಿರುವುದನ್ನು ಕಾಣಬಹುದು. ಇಲ್ಲಿನ ಅಮಾಯಕ ಜನರನ್ನು ಅಲ್ಲಾನೆ ಕಾಪಾಡಬೇಕು, ನಮ್ಮ ಮೇಲೆ ದೇವರೇ ಕರುಣೆ ತೋರಬೇಕು ಎಂದು ಅಳುತ್ತಾ ಹೇಳುತ್ತಿರುವುದನ್ನು ನೋಡಬಹುದು.ಈ ವಿಡಿಯೋವೊಂದು ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ಬಳಕೆದಾರರು ನಾನಾ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಬಳಕೆದಾರರೊಬ್ಬರು, ‘ಆಕೆಯ ಕಣ್ಣಲ್ಲಿ ಕಣ್ಣೀರೆ ಬರುತ್ತಿಲ್ಲ’ ಎಂದಿದ್ದಾರೆ. ಇನ್ನೊಬ್ಬರು, ‘ನಟಿಯಾಗಿ ಆಕೆಗೆ ಧಾರಾವಾಹಿಗಳಲ್ಲಿ ಒಳ್ಳೆಯ ಭವಿಷ್ಯವಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ಅತ್ಯದ್ಭುತ ವಿಡಿಯೋವೊಂದು ವೈರಲ್ ಆಗಿದೆ’ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ.








