ನಾಯ್ಡು ಪ್ರಮಾಣವಚನ ಸಮಾರಂಭ ಮುಂದೂಡಿಕೆ ….!

ನವದೆಹಲಿ:

     ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್​ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಚಂದ್ರಬಾಬು ಅವರು ಜೂನ್ 9 ರಂದು ಅಮರಾವತಿಯಲ್ಲಿ ಪ್ರಮಾಣವಚನ ಸ್ವೀಕರಿಸಬೇಕಿತ್ತು. ಆದರೆ, ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವುದರಿಂದ ಚಂದ್ರಬಾಬು ಪ್ರಮಾಣ ವಚನ ಸ್ವೀಕಾರ ಕೊಂಚ ತಡವಾಗಿದೆ.

    ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಜೂನ್ 9 ರ ಬದಲು ಜೂನ್ 12 (ಬುಧವಾರ) ಕ್ಕೆ ಮುಂದೂಡಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

    ಈ ಹಿಂದೆ ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿತ್ತು. ಜೂನ್ 8 ರಂದು ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾರಣ ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕದಲ್ಲಿ ಬದಲಾವಣೆಯಾಗಿದೆ. ಇದರೊಂದಿಗೆ ಚಂದ್ರಬಾಬು ನಾಯ್ಡು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ.

    ಅವರು ಮೊದಲ ಬಾರಿಗೆ 1995 ರಿಂದ 1999 ರವರೆಗೆ ಮತ್ತು ನಂತರ 1999 ರಿಂದ 2004 ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 2014 ರಲ್ಲಿ ರಾಜ್ಯ ವಿಭಜನೆಯ ನಂತರ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅವರ ಮೂರನೇ ಅವಧಿ ಪೂರೈಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap