ಇಂದಿನಿಂದ ಲಾಲ್‌ ಬಾಗ್‌ ಫ್ಲವರ್‌ ಷೋ : ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ…!

ಬೆಂಗಳೂರು: 

    ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ  ಲಾಲ್ ಬಾಗ್ ನಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.

    ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಪಾರ್ಕಿಂಗ್ ಸ್ಥಳಗಳು ಇಂತಿವೆ…

  • ಮರಿಗೌಡ ರಸ್ತೆಯ ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ಬೈಕ್ ಪಾರ್ಕಿಂಗ್​​
  • ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ ವ್ಯವಸ್ಥೆ
  • ಮರಿಗೌಡ ರಸ್ತೆಯ ಹಾಪ್ ಕಾಮ್ಸ್​​ನಲ್ಲಿ ಬೈಕ್ ಹಾಗೂ ಕಾರು ನಿಲುಗಡೆ
  • ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಹಾಗೂ ಕಾರು ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಪಾರ್ಕಿಂಗ್ ನಿಷೇಧ

  • ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್​ವರೆಗೆ ರಸ್ತೆಯ ಎರಡು ಬದಿ
  • ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್​ವರೆಗೆ ರಸ್ತೆಯ ಎರಡು ಬದಿ
  • ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಭಾಗ್ ಮುಖ್ಯದ್ವಾರದ ವರೆಗೆ
  • ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್​ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್​ವರೆಗೆ
  • ಬಿಟಿಎಸ್ ಬಸ್ ನಿಲ್ದಾಣ, ಬಿಎಂಟಿಸಿ ಜಂಕ್ಷನ್​ನಿಂದ ರಸ್ತೆಯ ಎರಡು ಬದಿಗಳಲ್ಲಿ
  • ಕೃಂಬಿಗಲ್ ರಸ್ತೆಯ ಎರಡು ಕಡೆಗಳಲ್ಲಿ
  • ಲಾಲ್‌ಬಾಗ್ ವೆಸ್ಟ್ಗೇಟ್‌ನಿಂದ ಆರ್.ವಿ. ಟೀರ್ಸ್​ ಕಾಲೇಜ್‌ವರೆಗೆ
  • ಆರ್‌ವಿ ಟೀರ್ಸ್​ ಕಾಲೇಜ್‌ನಿಂದ ಅಶೋಕ ಪಿಲ್ಲರ್​ವರೆಗೆ
  • ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ

ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡುವವರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಮೆಟ್ರೋ, ಬಿಎಂಟಿಸಿ, ಇತ್ಯಾದಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವಂತೆಯೂ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

Recent Articles

spot_img

Related Stories

Share via
Copy link