ದ.ಆಫ್ರೀಕಾ ಆಟಗಾರನಿಗೆ ಲೀಗಲ್‌ ನೋಟೀಸ್‌ ನೀಡಿದ ಪಿಸಿಬಿ….!

ನವದೆಹಲಿ:

     ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವ ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್​ಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಲೀಗಲ್ ನೋಟಿಸ್ ಕಳುಹಿಸಿದೆ. ಇದಕ್ಕೆ ಮುಖ್ಯ ಕಾರಣ ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿರುವುದು. ಅಂದರೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಷ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ಅವರು ಪಾಕಿಸ್ತಾನ್ ಸೂಪರ್ ಲೀಗ್​ಗಾಗಿ ಹೆಸರು ನೋಂದಾಯಿಸಿಕೊಂಡಿದ್ದರು. ಅದರಂತೆ ಪಿಎಸ್​ಎಲ್​ನ ಪೇಶಾವರ್ ಝಲ್ಮಿ ಫ್ರಾಂಚೈಸಿಯು ಬಾಷ್ ಅವರನ್ನು ಮುಂಬರುವ ಟೂರ್ನಿಗೆ ಆಯ್ಕೆ ಮಾಡಿಕೊಂಡಿದ್ದರು.

   ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಮೊಣಕಾಲಿನ ಗಾಯದ ಕಾರಣ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಲಿಝಾಡ್ ಅವರ ಬದಲಿಯಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಾರ್ಬಿನ್ ಬಾಷ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

    ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಬಾಷ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.

Recent Articles

spot_img

Related Stories

Share via
Copy link