ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿಯ ಬಂಧನ ….!

ಮುಂಬೈ:

    ಕೋಝಿಕ್ಕೋಡ್‌ನಿಂದ ಬಹ್ರೇನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಹಾಗೂ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

   ಶನಿವಾರ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(CSMIA) ವಿಮಾನ ತುರ್ತು ಭೂಸ್ಪರ್ಶ ಮಾಡಿದ ನಂತರ ಆರೋಪಿ, ಕೇರಳದ ಅಬ್ದುಲ್ ಮುಸಾವಿರ್ ನಡುಕಂಡಿಯನ್ನು ಬಂಧಿಸಲಾಗಿದೆ ಎಂದು ಸಹರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

   ಕೋಝಿಕ್ಕೋಡ್‌ನಿಂದ ವಿಮಾನ ಟೇಕಾಫ್ ಆಗುತ್ತಿದ್ದಂತೆ ಎಚ್ಚರಗೊಂಡ ಮುಸಾವಿರ್, ತಕ್ಷಣವೇ ವಿಮಾನದ ಹಿಂಭಾಗಕ್ಕೆ ತೆರಳಿ ಅಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಎಂದು ಅಧಿಕಾರಿ ತಿಳಿಸಿದ್ದಾರೆ. 

   ಸಿಬ್ಬಂದಿಗಳು ವ್ಯಕ್ತಿಯನ್ನು ತನ್ನ ಸೀಟಿಗೆ ಕರೆತರುವಲ್ಲಿ ಯಶಸ್ವಿಯಾದಾಗ, ಆ ವ್ಯಕ್ತಿ ಇತರ ಪ್ರಯಾಣಿಕರನ್ನು ಅವಾಚ್ಯವಾಗಿ ನಿಂದಿಸಲು ಆರಂಭಿಸಿದ ಮತ್ತು ಹಲ್ಲೆ ಮಾಡಲು ಯತ್ನಿಸಿದ. ಅಲ್ಲದೆ ತುರ್ತು ಬಾಗಿಲು ತೆರೆಯುವುದಾಗಿ ಬೆದರಿಕೆ ಹಾಕಿದನು ಎಂದು ಅಧಿಕಾರಿ ಹೇಳಿದರು.

   ಘಟನೆಯಿಂದ ಹೆದರಿದ ಪೈಲಟ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ತುರ್ತು ಭೂಸ್ಪರ್ಶ ಮಾಡಿ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದರು.ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 336, 504, 506 ಮತ್ತು 323 ಮತ್ತು ವಿಮಾನದ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap