ಬೆಂಗಳೂರು:
ರಾಜ್ಯ ಸರ್ಕಾರ ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಬಹುಮತದ ಸರ್ಕಾರ ಬೀಳಿಸಲು ಯೋಜನೆ ರೂಪಿಸಲಾಗುತ್ತಿದೆ. ನನಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ ಅವರು ಸಿಂಗಾಪುರದಿಂದ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಂಚು ರೂಪಿಸುವ ಬದಲು ವಿದೇಶದಲ್ಲಿ ಸಂಚು ರೂಪಿಸಲಾಗುತ್ತಿದೆ ಎಂದಿದ್ದಾರೆ.
ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಅವರು ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ