
ಕೊರೋನಾ ಕಾರಣದಿಂದಾಗಿ ಶೈಕ್ಷಣಿಕ ಅವಧಿ ಕಡಿತಗೊಂಡಿದೆ.
ಇದರ ಪರಿಣಾಮ ಪಠ್ಯಕ್ರಮ ಪೂರ್ಣಗೊಳಿಸಲು ಸಮಯ ಬೇಕಿದ್ದು, ಪರೀಕ್ಷೆಯನ್ನು ಮುಂದೂಡುವ ಚಿಂತನೆ ನಡೆಸಲಾಗಿದೆ. ಪ್ರತಿ ವರ್ಷ ಮಾರ್ಚ್ ವೇಳೆಗೆ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಈ ಬಾರಿ ಮೇ -ಜೂನ್ ನಲ್ಲಿ ನಡೆಯುವ ಸಾಧ್ಯತೆಯಿದೆ.
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳು ಪ್ರಮುಖವಾಗಿರುವುದರಿಂದ ಪಠ್ಯಕ್ರಮ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪಠ್ಯಕ್ರಮ ಪೂರ್ಣಗೊಳಿಸಬೇಕಿರುವುದರಿಂದ 15 -20 ದಿನ ತಡವಾಗಿ ಪರೀಕ್ಷೆ ಆರಂಭವಾಗಬಹುದು ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
