ಸ್ಥಿರಾಸ್ತಿ ಮಾರ್ಗಸೂಚಿ ದರ : ಕರಡು ಪ್ರಕಟ

ತುಮಕೂರು:

     2023-24ನೇ ಸಾಲಿನ ಲ್ಲಿ ತುರುವೇಕೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಬರುವ ಗ್ರಾಮಗಳ ಕೃಷಿ ಜಮೀನು, ನಿವೇಶನಗಳು ಹಾಗೂ ತುರುವೇಕೆರೆ ಪಟ್ಟಣದ ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ.

     ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಮಾರುಕಟ್ಟೆ ಮೌಲ್ಯಮಾಪನ ಉಪ ಸಮಿತಿ ಸಭೆ ಯಲ್ಲಿ ಕೈಗೊಂಡ ತೀರ್ಮಾನ ದಂತೆ ಪರಿಷ್ಕೃತ ಮಾರ್ಗಸೂಚಿ ಕರಡನ್ನು ತಹಸೀಲ್ದಾರ್ ಕಚೇರಿ ಹಾಗೂ ಉಪನೋಂದಣಾಧಿಕಾರಿ ಕಚೇರಿ ತುರುವೇಕೆರೆ ಇಲ್ಲಿ ನ ನೋಟಿಸ್ ಬೋರ್ಡ್ ನಲ್ಲಿ ಪ್ರಚುರ ಪಡಿಸಲಾಗಿದೆ.

    ಈ ಕುರಿತು ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಗೊಂಡ 15 ದಿನದೊಳಗೆ ಲಿಖಿತ ರೂಪದಲ್ಲಿ ಉಪನೋಂದಣಾಧಿಕಾರಿ ಕಚೇರಿ ತುರುವೇಕೆರೆ ಇಲ್ಲಿಗೆ ಸಲ್ಲಿಸಲು ಸಬ್ ರಿಜಿಸ್ಟರ್ ಪ್ರಗತಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap