ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಆಗ್ರಹ : ಪ್ರತಿಭಟನಾಕಾರರ ಬಂಧನ

ಕಲಬುರಗಿ:

   ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನವಾದ ಇಂದು ತಮಗೆ ಪ್ರತ್ಯೇಕ ರಾಜ್ಯ ಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಭಾಗದ ಜನರು ಪ್ರತಿಭಟನೆ ನಡೆಸುತ್ತಿದ್ದರು. ಕಳೆದೊಂದು ವರ್ಷದಿಂದ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಾಗಿದೆ.

   ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ. ಹಾಗೇ, ಅದರ ವಿಡಿಯೋವನ್ನು ಕೂಡ ಹಂಚಿಕೊಂಡಿದೆ. ಕಳೆದ ವರ್ಷವೂ ಕಲಬುರಗಿಯಲ್ಲಿ ಕನ್ನಡ ರಾಜ್ಯೋತ್ಸವದ ದಿನದಂದೇ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿತ್ತು.

   ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ನಡೆದಿತ್ತು. ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯು ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿತ್ತು. ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.

Recent Articles

spot_img

Related Stories

Share via
Copy link