ಬಂಗಳೂರಿಗರಿಗೆ ವಾರದ ಆರಂಭದಲ್ಲಿಯೇ ಷಾಕ್‌ ನೀಡಿದ ವರುಣ ….!

ಬೆಂಗಳೂರು: 

    ಬೆಂಗಳೂರಿಗೆ ಸೋಮವಾರ ನಸುಕಿನ ಜಾವವೇ ಭಾರೀ ಮಳೆಯ ದರ್ಶನವಾಗಿದೆ. ಸತತವಾಗಿ ಸುರಿದ ಮಳೆಯಿಂದಾಗಿ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ.

    ರಾಜಧಾನಿಯ ಹಲವು ರಸ್ತೆಗಳು ಜಲಾವೃತವಾಗಿದ್ದು, ಇನ್ನು ಕೆಲವು ರಸ್ತೆಗಳು ಕೆಸರುಮಯವಾಗಿ ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಯಿತು. ಬೆಳಗ್ಗೆ ಕಚೇರಿಗೆ ಹೋಗುವವರು, ಶಾಲೆ-ಕಾಲೇಜುಗಳಿಗೆ ಹೋಗುವವರಿಗೆ ತೊಂದರೆಯಾಗಿದೆ. ನೀರು ನಿಂತು ಅಂಡರ್​ಪಾಸ್​ಗಳು ಜಲಾವೃತಗೊಂಡಿವೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.

ಹಲವು ಭಾಗಗಳಲ್ಲಿ ಮಧ್ಯರಾತ್ರಿಯೇ ಮಳೆ ಆರಂಭವಾಗಿದೆ. ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್​​, ಹೆಬ್ಬಾಳ, ಯಲಹಂಕ, ಕೆ.ಆರ್​.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ.

Recent Articles

spot_img

Related Stories

Share via
Copy link
Powered by Social Snap