ಡಿ 3ರ ವರೆಗೆ ಹಲವು ಜಿಲ್ಲೆಗಳಲ್ಲಿ ಮಳೆ : ಹವಾಮಾನ ಇಲಾಖೆ

ಬೆಂಗಳೂರು

         ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. 

      ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು? ಇಂದಿನಿಂದ ಡಿಸೆಂಬರ್‌ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರಲ್ಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

     ಇದೇ ತಿಂಗಳು ದುಬೈಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ! SKIP ಇನ್ನೂ ಸೋಮವಾರ ಬೆಂಗಳೂರಿನ ಹಲವು ಕಡೆ ತುಂತುರು ಮಳೆಯಾಗಿದೆ, ಇಂದು ಸಹ ಮೋಡಕವಿದ ವಾತಾವರಣ ವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap