ಇಂದಿನಿಂದ ಮತ್ತೆ ಚುರುಕಾಗಲಿದೆ ಮುಂಗಾರು …!

ಬೆಂಗಳೂರು:- 

    ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.ಜೂನ್ 12 ರಾಜ್ಯದ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿ ಮುನ್ಸೂಚನೆ ನೀಡಿದೆ.

     ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಬೆಂಗಳೂರಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದ್ದು, ನಗರದಾದ್ಯಂತ ಮೋಡ ಕವಿದ ವಾತಾವರಣವು ಮುಂದುವರೆಯಲಿದೆ. ತಾಪಮಾನ 21 ಡಿಗ್ರಿಗೆ ಇಳಿಯಲಿದ್ದು ಸಾಧಾರಾಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

    ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮುಂಗಾರು ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಬೆಂಗಳೂರು ಹವಾಮಾನ ಕೇಂದ್ರದ (IMD) ವಿಜ್ಞಾನಿಎಫ್’ ಮುಖ್ಯಸ್ಥರಾದ ಡಾ.ಎನ್.ಪುವಿಯರಸನ್ ಮಾಹಿತಿ ಹಂಚಿಕೊಂಡಿದ್ದಾರೆ.

    ಜೂನ್ 12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ (30-40 ಕಿ.ಮೀ.) ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನರ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link