ಅಥಣಿ ಟಿಕೆಟ್‌ : ಮರು ಪರಿಶೀಲನೆಗೆ ಹೈಕಮಾಂಡ್‌ ಗೆ ಮನವಿ : ಸವದಿ

ಬೆಳಗಾವಿ:

     ಬಿಜೆಪಿಯಿಂದ ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ ಕುಮಠಳ್ಳಿ ಅವರನ್ನು ಕಣಕ್ಕಿಳಿಸುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅಥಣಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಮುಂದಿನ ನಡೆ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

     ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ರಾತ್ರಿ 9 ಗಂಟೆಗೆ ರಿಲೀಸ್ ಮಾಡಿದೆ. ಅಥಣಿ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ಸವದಿ, ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ 

    ಏಪ್ರಿಲ್ 13 ರಂದು ನನ್ನ ಬೆಂಬಲಿಗರು ಮತ್ತು ಅಥಣಿ ಜನತೆಯನ್ನು ಭೇಟಿ ಮಾಡಿ ಮುಂದಿನ ನಡೆ ಬಗ್ಗೆ ನಿರ್ಧರಿಸುತ್ತೇನೆ, ಜನರು ಬಯಸಿದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತೇನೆ,” ಎಂದರು. ತಮ್ಮ ಬೆಂಬಲಿಗರ ಇಚ್ಛೆಯಿದ್ದಲ್ಲಿ ಅಥಣಿಯಿಂದ ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ಧ  ಎಂದು ಸವದಿ ಬಾಂಬ್ ಹಾಕಿದ್ದಾರೆ.

   ಎಂಎಲ್‌ಸಿ ಚುನಾವಣೆಯಿಂದ ಹೊರಗುಳಿಯುವಾಗ ಬೊಮ್ಮಾಯಿ ಅವರಿಗೆ 2023ರ ಚುನಾವಣೆಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಅವರು ಹೇಳಿದರು. “ನಾನು ಕಳೆದ ಎರಡು ದಶಕಗಳಿಂದ ಪಕ್ಷದ ನಿಷ್ಠಾವಂತ ಸಿಪಾಯಿಯಾಗಿದ್ದು,  ಪಕ್ಷದ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಪಕ್ಷವು ಪಕ್ಷದ ನಿಷ್ಠಾವಂತ ಮಗನನ್ನು ಕಳೆದುಕೊಳ್ಳದಂತೆ ನಾನು ವಿನಂತಿಸುತ್ತೇನೆ. ಪಕ್ಷವು ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ನನ್ನನ್ನು ಅಥಣಿಯಿಂದ ಕಣಕ್ಕಿಳಿಸಲು ನಾನು ಮನವಿ ಮಾಡುತ್ತೇನೆ ಎಂದು ಸವದಿ ತಿಳಿಸಿದ್ದಾರೆ.
    ಲಕ್ಷ್ಮಣ ಸವದಿ ಈಗಾಗಲೇ ಕಾಂಗ್ರೆಸ್ ಸಂಪರ್ಕದಲ್ಲಿದ್ದು,  ಅಥಣಿಯಿಂದ ಬಿಜೆಪಿ ಟಿಕೆಟ್ ನಿರಾಕರಿಸಿದರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು  ತಿಳಿಸಿವೆ. ಸವದಿ ಕಾಂಗ್ರೆಸ್ ಸೇರಲು ಬಯಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡ ಅಥಣಿ ಕ್ಷೇತ್ರದ ಅಭ್ಯರ್ಥಿ ಘೋಷಿಸಲು ವಿಳಂಬ ಮಾಡುತ್ತಿದೆ ಎಂದು ತಿಳಿದು ಬಂದಿದೆ
    ಸವದಿ ಅವರು ತಮ್ಮ ರಾಜಕೀಯ ಗುರು ದಿವಂಗತ ಅನಂತ್ ಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯದಲ್ಲಿ ಬೆಳೆಯಲು ಸಹಾಯ ಮಾಡಿದ ಹಲವಾರು ನಾಯಕರಿಗೆ ಧನ್ಯವಾದ ಅರ್ಪಿಸಿದರು.
    ಕಳೆದ 30 ವರ್ಷಗಳಿಂದ ನನಗೆ ಆಶೀರ್ವಾದ ಮಾಡಿದ ಅಥಣಿ ಮತಕ್ಷೇತ್ರದ ಜನತೆಗೆ ಯಾವತ್ತೂ ನಾನು ಚಿರಋುಣಿಯಾಗಿದ್ದೇನೆ. ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ನಿಮ್ಮೆಲ್ಲರ ಆಶೀರ್ವಾದದಿಂದ ಶಾಸಕರಾಗಿ, ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ಇಂದು ನನ್ನ ರಾಜಕೀಯ ಜೀವನಕ್ಕೆ ಸಂಕಷ್ಟಎದುರಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap