ಬೆಂಗಳೂರು:
ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ.
ಹೆಚ್.ಡಿ.ರೇವಣ್ಣ ಅವರನ್ನು ಅಮಾನತು ಮಾಡಬೇಕೆಂದು ಪಕ್ಷದ ಮುಖಂಡರು ಒತ್ತಾಯಿಸುತ್ತಿದ್ದಾರೆ. ಇದೀಗ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಹಾಗೂ ಅವರನ್ನು ಎಸ್‌ಐಟಿ ತಂಡ ಬಂಧಿಸಿ ಜೈಲುಪಾಲಾಗಿರುವುದು ಪಕ್ಷದ ಕಾರ್ಯಕರ್ತರು ಮುಜುಗರ ಎದುರಿಸುವಂತಾಗಿದೆ. ಪಕ್ಷದ ಬಗ್ಗೆ ನಾಯಕರಿಗೆ ಗಟ್ಚಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.
ಜೆಡಿಎಸ್ ಕೋರ್ ಸಮಿತಿ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಲಿದ್ದು ಅದರಲ್ಲಿ ಹೆಚ್ ಡಿ ರೇವಣ್ಣ ಅಮಾನತಿನ ಕುರಿತು ನಿರ್ಧಾರವಾಗಲಿದೆ ಎಂದು ತಿಳಿದುಬಂದಿದೆ.ಎಸ್ ಐಟಿ ಕಸ್ಟಡಿಯಲ್ಲಿದ್ದ ಹೆಚ್ ಡಿ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಅವರೀಗ ಕೈದಿ ನಂಬರ್ 4567 ಆಗಿದ್ದಾರೆ.
ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಸಿಗದ್ದಿದ್ದರೆ ಮೇ 14ರವರೆಗೆ ರೇವಣ್ಣ ಜೈಲಿನಲ್ಲೇ ಇರಬೇಕಾಗುತ್ತದೆ.