ನವದೆಹಲಿ:
ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 39 ಪೈಸೆ ಕುಸಿದಿದ್ದು, ಪ್ರತಿ ಡಾಲರ್ ಗೆ 87.46 ರೂ. ಗೆ ತಲುಪಿ, ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಅತಿದೊಡ್ಡ ವ್ಯಾಪಾರ ಪಾಲುದಾರರಾದ ಚೀನಾ, ಮೆಕ್ಸಿಕೊ ಮತ್ತು ಕೆನಡಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ದಂಡನಾತ್ಮಕ ಸುಂಕಗಳನ್ನು ವಿಧಿಸಿದ್ದಾರೆ. ಪರಿಣಾಮ ಜಾಗತಿಕ ಹಣಕಾಸು ಮಾರುಕಟ್ಟೆಗಳು ಅಲುಗಾಡಿದ್ದು, ವ್ಯಾಪಾರ ಯುದ್ಧದ ಭಯವನ್ನು ಹೆಚ್ಚಿಸಿದೆ. ಈ ಬೆಳವಣಿಗೆಗಳಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ.
ಇದಲ್ಲದೆ, ಭಾರತೀಯ ರಿಸರ್ವ್ ಬ್ಯಾಂಕ್‌ನ ದರ ಕಡಿತದ ಕಳವಳಗಳು ಮತ್ತು ವಿದೇಶಿ ಮಾರುಕಟ್ಟೆಯಲ್ಲಿ ಅಮೆರಿಕನ್ ಕರೆನ್ಸಿಯ ವ್ಯಾಪಕ ಬಲವು ಹೂಡಿಕೆದಾರರ ಭಾವನೆಗಳನ್ನು ಮತ್ತಷ್ಟು ಕೆರಳಿಸಿದೆ. ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯ ಪ್ರತಿ ಡಾಲರ್ ಗೆ ರೂಪಾಯಿ ಮೌಲ್ಯ 87.13ರಷ್ಟು ಇತ್ತು. ದಿನಾಂತ್ಯದ ವೇಳೆಗೆ ಇದು 87.46 ರೂಪಾಯಿಗಳಿಗೆ ತಲುಪಿತು.