ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಪ್ರೋತ್ಸಾಹ ಧನ ಹೆಚ್ಚಳ…!

ಬೆಂಗಳೂರು

    ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್​ಸಿ ಹಾಗೂ ಎಸ್​ಟಿ ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ ಐಐಎಂ/ ಐಐಎಸ್ ಸಿ/ ಎನ್ ಐಟಿ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 1 ಲಕ್ಷ‌ದಿಂದ 2 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

   ಪಿಯುಸಿ ಪರೀಕ್ಷೆಯಲ್ಲಿ 95% ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್​ಮೆಂಟ್ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ. ಸರ್ಕಾರದಿಂದ ಕಾಲೇಜು ಶುಲ್ಕವಾಗಿ ಪಾವತಿಸಲಾಗುತ್ತದೆ. 

   ಹಾಗೇ ಎಂಬಿಬಿಎಸ್ ಪದವಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂ. ಪ್ರೋತ್ಸಾಹ ಧನ  ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

   ಪಿಯುಸಿ ಪರೀಕ್ಷೆಯಲ್ಲಿ ಶೇ 95ಕ್ಕೂ ಹೆಚ್ಚು ಅಂಕ ಪಡೆದು, ನೀಟ್‌ನಲ್ಲಿ ಅರ್ಹತೆ ಪಡೆದರೂ ಆಡಳಿತ ಮಂಡಳಿಯ ಕೋಟಾದಡಿ ಕಾಲೇಜು ಶುಲ್ಕ ಕಟ್ಟಲು ಸಾಧ್ಯವಾಗದೆ ಕೆಲವು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಅಲವತ್ತುಕೊಂಡಿದ್ದ ವಿದ್ಯಾರ್ಥಿಗಳು, ಕಾಲೇಜು ಶುಲ್ಕ ಕಟ್ಟಲು ಹಣಕಾಸಿನ ನೆರವು ನೀಡುವಂತೆ ಸಮಾಜ ಕಲ್ಯಾಣ ಸಚಿವರು ಮತ್ತು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

Recent Articles

spot_img

Related Stories

Share via
Copy link