ಜಮ್ಮು ಜೈಲುಗಳ ಮೇಲೆ ಭಯೋತ್ಪಾದಕ ದಾಳಿ ಸಾಧ್ಯತೆ : ಭದ್ರತೆ ಹೆಚ್ಚಳ

ಶ್ರೀನಗರ

    ಜಮ್ಮು ಮತ್ತು ಕಾಶ್ಮೀರದ ಜೈಲು ಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಇದೆ ಎಂದು ಮೂಲಗಳು ಸೂಚಿಸಿವೆ. ಇದರಿಂದಾಗಿ ಭದ್ರತೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಗುಪ್ತಚರ ಮಾಹಿತಿಯ ಪ್ರಕಾರ ಶ್ರೀನಗರ ಕೇಂದ್ರ ಜೈಲು ಮತ್ತು ಜಮ್ಮುವಿನ ಕೋಟ್ ಬಲ್ವಾಲ್ ಜೈಲುಗಳನ್ನು ಗುರಿಯಾಗಿಸಿ ದಾಳಿ ನಡೆಸಬಹುದು ಎಂದು ಅಂದಾಜಿಸಲಾಗಿದೆ.

    ಈ ಜೈಲುಗಳಲ್ಲಿ ಪ್ರಸ್ತುತ ಭಯೋತ್ಪಾದಕರು ಹಾಗೂ ಭೂಗತ ಲೋಕದ ಕೊಲೆ ಪಾತಕಿಗಳಿದ್ದಾರೆ. ಅವರು ದಾಳಿಗಳಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಸಹ, ಲಾಜಿಸ್ಟಿಕಲ್ ಸಹಾಯ, ಆಶ್ರಯ ಮತ್ತು ಅವರ ಓಡಾಟ ಸುಗಮಗೊಳಿಸುವ ಮೂಲಕ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಾರೆ.

     26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದನಾ ತನಿಖೆಗೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ಸೇನಾ ವಾಹನ ದಾಳಿ ಪ್ರಕರಣಕ್ಕೂ ಸಂಬಂಧಿಸಿದ ನಿಸಾರ್ ಮತ್ತು ಮುಷ್ತಾಕ್ ಅವರನ್ನು ವಿಚಾರಣೆಗೆ ಒಳಪಡಿಸಿತು. ಗುಪ್ತಚರ ಮಾಹಿತಿಯ ನಂತರ, ಜೈಲುಗಳ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಗಳನ್ನು ಬಲಪಡಿಸಲಾಗಿದೆ. ಅಕ್ಟೋಬರ್ 2023 ರಲ್ಲಿ CISF ಜಮ್ಮು ಮತ್ತು ಕಾಶ್ಮೀರ ಜೈಲುಗಳ ಭದ್ರತೆಯನ್ನು CRPF ನಿಂದ ವಹಿಸಿಕೊಂಡಿತು.

    ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಅಮಾಯಕರನ್ನು ಹತ್ಯೆ ಮಾಡಿದ್ದರು. ಇದರ ಹೊಣೆಯನ್ನು ಲಷ್ಕರ್ ಎ ತೊಯ್ಬಾದ ಟಿಆರ್​ಎಫ್​ ಹೊತ್ತುಕೊಂಡಿತ್ತು. ಬಳಿಕ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾದ ನಂತರ ಹೇಳಿಕೆಯಿಂದ ಹಿಂದೆ ಸರಿದಿತ್ತು.

Recent Articles

spot_img

Related Stories

Share via
Copy link