10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ

ಬೆಂಗಳೂರು: 

     ಬೆಂಗಳೂರು ಹಾಗೂ ಇತರ 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದು, ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯ ರಾತ್ರಿ 1 ಗಂಟೆಯವರೆಗೆ ವಿಸ್ತರಿಸುವುದಾಗಿ ಹೇಳಿದ್ದಾರೆ.

    ರಾಜಧಾನಿ ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ.

Recent Articles

spot_img

Related Stories

Share via
Copy link
Powered by Social Snap