ಕಾಂಗ್ರೆಸ್‌ ನೊಂದಿಗೆ YSRTP ವಿಲೀನ : ನಿಗೂಢವಾದ ವೈ ಎಸ್‌ ಶರ್ಮಿಳಾ ನಡೆ…!

ಹೈದರಾಬಾದ್‌ 

    ಆಗಿನ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ದಿ.ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಅವರು ತಾವು  ಕಟ್ಟಿದ ಯುವಜನ ಶ್ರಮಿಕ ರೈತ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಕುರಿತು ಮಾತುಕತೆ ನಡೆಸುತ್ತಿದ್ದಾರೆ ಎಂದು ಊಹಾಪೋಹಗಳು ಹರಿದಾಡುತ್ತಿದ್ದು ಇನ್ನಷ್ಟೆ ಇದರ ಬಗ್ಗೆ ಸ್ಪಷ್ಟನೆ ಸಿಗಬೇಕಿದೆ.

    ತೆಲಂಗಾಣ ಚುನಾವಣೆಗೂ ಮುನ್ನ ಈ ಪ್ರಮುಖ ನಿರ್ಧಾರಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿಯಾಗಿರುವ ಶರ್ಮಿಳಾ ಅವರು ಬಂದಿದ್ದಾರೆ ಎಂದು ವರದಿಯಾಗಿದೆ. ಜುಲೈ 8 ರಂದು ವೈಎಸ್‌ಆರ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ವಿಲೀನದ ಕುರಿತು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

     ಕರ್ನಾಟಕದಲ್ಲಿ ಚುನಾವಣಾ ಗೆಲುವಿನಿಂದ ಉತ್ಸುಕವಾಗಿರುವ ಕಾಂಗ್ರೆಸ್ ಪಕ್ಷವು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ವರದಿಯಾಗಿದೆ. ಎರಡೂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಕೆಲ ತಿಂಗಳಲ್ಲಿ ನಡೆಯಲಿವೆ.

    ವೈಎಸ್‌ಆರ್ ಅವರ ಪರಂಪರೆಯನ್ನು ಮರು ನಿರ್ಮಿಸುವ ಮೂಲಕ ಕಾಂಗ್ರೆಸ್ ಅನ್ನು ಬಲಪಡಿಸುವ ಜವಾಬ್ದಾರಿಯನ್ನು ಶರ್ಮಿಳಾ ಅವರಿಗೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

    ತಮ್ಮ ಸಹೋದರನೊಂದಿಗಿನ ಸಂಬಂಧ ಇನ್ನಷ್ಟು ಹದಗೆಡಿಸಬಹುದು ಆತಂಕದ ಹಿನ್ನೆಲೆಯಲ್ಲಿ ಶರ್ಮಿಳಾ ಹಿಂಜರಿಯಬಹುದು ಎಂದು ಹೇಳಲಾಗುತ್ತಿದೆ. ತೆಲಂಗಾಣದಲ್ಲಿ ತಮ್ಮದೇ ಆದ ರಾಜಕೀಯ ಪಕ್ಷವನ್ನು ಶರ್ಮಿಳಾ ಕಟ್ಟಿದ್ದಾರೆ. ಈ ಮೂಲಕ ರಾಜಕೀಯ ಹೋರಾಟಕ್ಕೆ ಪ್ರವೇಶಿಸಲು ನಿರ್ಧರಿಸಿದರು. ಆ ನಂತರ ಸಹೋದರ-ಸಹೋದರಿ ಇಬ್ಬರೂ ಪರಸ್ಪರ ಮಾತುಕತೆ ನಡೆಸುತ್ತಿಲ್ಲ ಎಂದು ತಿಳಿದುಬಂದಿದೆ.

     ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಜಯಗಳಿಸಿದ ಕೆಲವೇ ದಿನಗಳಲ್ಲಿ ಶರ್ಮಿಳಾ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಮಯದಲ್ಲಿ ಕಾಂಗ್ರೆಸ್‌ನೊಂದಿಗೆ ವಿಲೀನದ ಮಾತುಕತೆ ನಡೆದಿದೆ ಎಂದು ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.

     ಈ ಹಿಂದೆ, ಶರ್ಮಿಳಾ ಅವರು ಕಾಂಗ್ರೆಸ್‌ನೊಂದಿಗೆ ತಮ್ಮ ಪಕ್ಷವನ್ನು ವಿಲೀನಗೊಳಿಸುವ ಊಹಾಪೋಹಗಳನ್ನು ನಿರಾಕರಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap