ಬೆಂಗಳೂರು:
ಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ. ವೇತನ ಹೆಚ್ಚಳ ಸಂಬಂಧ ಅಧಿಕೃತ ಆದೇಶಗಳು ಬಂದಿಲ್ಲ. ಈ ಕುರಿತ ವಿವರಗಳೂ ನಮಗೆ ಸಿಕ್ಕಿಲ್ಲ. ಶೇ.20ಕ್ಕಿಂತ ಕಡಿಮೆ ವೇತನ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ. ಸರಕಾರ ಏಕಪಕ್ಷೀಯವಾಗಿ ಶೇ.15ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಇದು ನ್ಯಾಯಸಮ್ಮತವಲ್ಲ.
ಹೀಗಾಗಿ ಈ ಹಿಂದೆ ಘೋಷಿಸಿದಂತೆ ಮಾರ್ಚ್ 21 ರಿಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಪ್ರಕಟಣೆಯಲ್ಲಿ ತಿಳಿಸಿದೆ.