ಅಸ್ಟ್ರೇಲಿಯ
ಮುಂದಿನ ತಿಂಗಳು ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಲಿದೆ. ನವೆಂಬರ್ 15 ರಿಂದ 17 ರವರೆಗೆ ನಡೆಯಲಿರುವ ಈ ಅಭ್ಯಾಸ ಪಂದ್ಯಕ್ಕಾಗಿ ವೆಸ್ಟರ್ನ್ ಆಸ್ಟ್ರೇಲಿಯನ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇಲ್ಲಿ ಭಾರತ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅಥವಾ ಜಸ್ಪ್ರೀತ್ ಬುಮ್ರಾ ಮುನ್ನಡೆಸುವ ಸಾಧ್ಯತೆಯಿದೆ. ವೈಯುಕ್ತಿಕ ಕಾರಣಗಳಿಂದಾಗಿ ಹಿಟ್ಮ್ಯಾನ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದ್ದು. ಹೀಗಾಗಿ ಹಂಗಾಮಿ ನಾಯಕರಾಗಿ ಬುಮ್ರಾ ಕಾಣಿಸಿಕೊಳ್ಳಬಹುದು.
ಅತ್ತ ಭಾರತ ಎ ತಂಡದ ನಾಯಕರಾಗಿ ರುತುರಾಜ್ ಗಾಯಕ್ವಾಡ್ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ ದೇಶೀಯ ಅಂಗಳದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರು ಕೂಡ ಭಾರತ ಎ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.
ಅದರಂತೆ ನವೆಂಬರ್ 15 ರಿಂದ ಭಾರತ ಮತ್ತು ಭಾರತ ಎ ತಂಡಗಳು ಆಸ್ಟ್ರೇಲಿಯಾದಲ್ಲಿ ಅಭ್ಯಾಸ ಪಂದ್ಯವಾಡಲಿದ್ದು, ಈ ಮೂಲಕ ಪ್ರತಿಷ್ಠಿತ ಟೆಸ್ಟ್ ಸರಣಿಗೆ ಸಿದ್ಧತೆ ಮಾಡಿಕೊಳ್ಳಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್ನಲ್ಲಿ ನಡೆದರೆ, ಎರಡನೇ ಪಂದ್ಯವು ಅಡಿಲೇಡ್ನಲ್ಲಿ ಜರುಗಲಿದೆ.ಹಾಗೆಯೇ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್ನಲ್ಲಿ ನಡೆಯಲಿದೆ. ಹಾಗೆಯೇ ಕೊನೆಯ ಪಂದ್ಯವು ಸಿಡ್ನಿಯಲ್ಲಿ ಜರುಗಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪಿಂಕ್ ಬಾಲ್ ಟೆಸ್ಟ್ ಆಡಲಿದೆ. ಅಂದರೆ ಅಡಿಲೇಡ್ನಲ್ಲಿ ನಡೆಯಲಿರುವ ಈ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯವು ಹೊನಲು ಬೆಳಕಿನಲ್ಲಿ ಜರುಗಲಿದೆ. ಹೀಗಾಗಿ ಈ ಮ್ಯಾಚ್ನಲ್ಲಿ ಉಭಯ ತಂಡಗಳಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.