ದೆಹಲಿ : ಹಾಡು ಹಗಲೇ ಗನ್‌ ತೋರಿಸಿ ದರೋಡೆ…!

ನವದೆಹಲಿ:

    ಇಂಡಿಯಾ ಗೇಟ್‌ನಿಂದ ರಿಂಗ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಪ್ರಗತಿ ಮೈದಾನದ ಸುರಂಗ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗನ್ ತೋರಿಸಿ ಕಾರಿನಲ್ಲಿದ್ದ ಡೆಲಿವರಿ ಏಜೆಂಟ್‌ನ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.
 
   ಪಟೇಲ್ ಸಾಜನ್ ಕುಮಾರ್ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಅವರು ಚಾಂದಿನಿ ಚೌಕ್‌ನಲ್ಲಿರುವ ಓಮಿಯಾ ಎಂಟರ್‌ಪ್ರೈಸಸ್‌ನಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ತನ್ನ ಸ್ನೇಹಿತ ಜಿಗರ್ ಪಟೇಲ್ ಜೊತೆ ಸೇರಿ ಶನಿವಾರ ಸಂಜೆ ಗುರುಗ್ರಾಮಕ್ಕೆ 2 ಲಕ್ಷ ರೂ. ನೀಡಲು ಹೋಗುತ್ತಿದ್ದರು.
   ರಿಂಗ್ ರಸ್ತೆಯಿಂದ ಪ್ರಗತಿ ಮೈದಾನದ ಸುರಂಗ ಮಾರ್ಗ ಪ್ರವೇಶಿಸಿ ಸ್ವಲ್ಪ ದೂರ ಸಾಗುತ್ತಿದ್ದಾಗ 2 ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಗನ್ ತೋರಿಸಿ ಬಲವಂತವಾಗಿ ಕ್ಯಾಬ್ ತಡೆದಿದ್ದಾರೆ. ಬಳಿಕ ನಗದು ತುಂಬಿದ್ದ ಬ್ಯಾಗ್ ಅನ್ನು ದೋಚಿ, ಪರಾರಿಯಾಗಿದ್ದಾರೆ.
   ಪಟೇಲ್ ಸಾಜನ್ ಕುಮಾರ್ ದೂರಿನ ಮೇರೆಗೆ ತಿಲಕ್ ಮಾರ್ಗ್ ಠಾಣೆ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 397 ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಈವರೆಗೂ ದುಷ್ಕರ್ಮಿಗಳ ಸುಳಿವು ಪತ್ತೆಯಾಗಿಲ್ಲ. ಈ ನಡುವೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದರೋಡೆ ಪ್ರಕರಣದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap