ಮೈಸೂರು
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಬೆರಳೆಣಿಕೆಯಷ್ಟು ದಿನಗಳು ಬಾಕಿ ಇವೆ. ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ.
ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ.
ಸಂಜೆ 7ಕ್ಕೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ಅನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.ಈ ಬಾರಿ ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.
ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿವೆ. ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡುತ್ತವೆ (ಸ್ಥಳೀಯ ವೇಳಾಪಟ್ಟಿಗಳನ್ನು ಪರಿಶೀಲಿಸಿ) ಖಾಸಗಿ ವಾಹನದಲ್ಲಿ ಹೋಗುವವರಿಗೆ ಕಾರ್ಯಕ್ರಮ ನಡೆಯವ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಇದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ದಸರಾ 2024 ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಗಳಿಗೆ ಭೇಟಿ ನೀಡಿ.