ಬೆಂಗಳೂರು : ಹಾಸನ ವೀಡಿಯೋ ಹಂಚಿಕೆ ಶಿಕ್ಷಾರ್ಹ ಅಪರಾಧ

ಬೆಂಗಳೂರು: 

    ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್

     ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಪ್‌ನಂತಹ ಮೆಸೆಂಜರ್ ಆಪ್ ಸೇರಿ) ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. 

    ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಸಹಾಯವಾಣಿ 63609 38947 ಈ ನಂಬರ್ ಅನ್ನು ಬೆಳಿಗ್ಗೆ 8 ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು

    ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಈ ಮೂಲಕ ಸೂಚಿಸಲಾಗುತ್ತಿದೆ. ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು

 

Recent Articles

spot_img

Related Stories

Share via
Copy link
Powered by Social Snap