ಬೆಂಗಳೂರು
ಕರ್ನಾಟಕ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿಯನ್ನು ಪರಿಷ್ಕೃತ ಮಾಡುವುದಕ್ಕೆ ಅವಕಾಶವಿದೆ. ಹೀಗೆಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯ ಪೀಠ ಈ ಸೂಚನೆ ನೀಡಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಮತದಾರರ ಪಟ್ಟಿ ಪರಿಷ್ಕರಿಸಬಹುದು ಎಂದು ತಿಳಿಸಿದೆ.
ಅಲ್ಲದೇ ವಿಧಾನಸಭಾ ಕ್ಷೇತ್ರದ ಶಾಸಕರ ಹೆಸರನ್ನು ಆ ಕ್ಷೇತ್ರದ ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತಹ ಕಾರ್ಯ ಆಗಬಾರದು. ಈ ರೀತಿಯ ವಿಚಾರಗಳನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ