ಲೋಕ ಫೈಟ್‌ : 49 ಸ್ಥಾನಗಳಿಗೆ ಮತದಾನ ಅರಂಭ….!

ನವದೆಹಲಿ:

   ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಸೋಮವಾರ ಆರಂಭವಾಗಿದ್ದು, 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಸ್ಥಾನಗಳಿಗೆ ಮತದಾನ ಆರಂಭಗೊಂಡಿದೆ.

    5ನೇ ಹಂತದಲ್ಲಿ ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಒಡಿಶಾದ 5, ಬಿಹಾರದ 5, ಜಾರ್ಖಂಡ್‌ನ 3, ಜಮ್ಮು ಮತ್ತು ಕಾಶ್ಮೀರದ ಒಂದು ಮತ್ತು ಲಡಾಖ್‌ನ ಒಂದು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

   ಈ ಹಂತದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ರಾಹುಲ್ ಗಾಂಧಿ, ಚಿರಾಗ್ ಪಾಸ್ವಾನ್, ರಾಜೀವ್ ಪ್ರತಾಪ್ ರೂಡಿ, ರೋಹಿಣಿ ಆಚಾರ್ಯ, ಒಮರ್ ಅಬ್ದುಲ್ಲಾ ಮತ್ತು ಪಿಯೂಷ್ ಗೋಯಲ್ ಅವರಂತಹ ಹಿರಿಯ ನಾಯಕರನ್ನು ಒಳಗೊಂಡಿದ್ದು, ಅವರ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

   ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಈ ಹಂತದಲ್ಲಿ 8.95 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ ಒಟ್ಟು 94372 ಮತಗಟ್ಟೆಗಳನ್ನು ರಚಿಸಲಾಗಿದ್ದು, ಇದರಲ್ಲಿ 9.47 ಲಕ್ಷ ಮತಗಟ್ಟೆ ಅಧಿಕಾರಿಗಳು ಮತದಾನ ಪ್ರಕ್ರಿಯೆ ನಡೆಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸಲಿದ್ದಾರೆ.

   ಮತದಾನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ದಶಕಗಳಿಂದ ನಿಮ್ಮ ಹಕ್ಕುಗಳನ್ನು ಕಸಿದುಕೊಂಡಿರುವ ಕುಟುಂಬಗಳಿಗೆ ಉತ್ತರ ನೀಡಲು ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಇಲ್ಲಿನ ನಿವಾಸಿಗಳಲ್ಲಿ ಮನವಿ ಮಾಡುತ್ತೇನೆ. ನಿಮ್ಮ ಸಂಸದೀಯ ಕ್ಷೇತ್ರದಲ್ಲಿ ದೇಶದ ಏಕತೆ, ಸಮಗ್ರತೆ ಮತ್ತು ನಿಮ್ಮ ಪ್ರದೇಶದ ಅಭಿವೃದ್ಧಿಗೆ ಮೀಸಲಾದ ಪ್ರತಿನಿಧಿಯನ್ನು ಆಯ್ಕೆ ಮಾಡಿ. ನಿಮ್ಮ ಒಂದು ಮತವು ಜಮ್ಮು ಮತ್ತು ಕಾಶ್ಮೀರದ ಮಕ್ಕಳ ಶಾಂತಿ ಮತ್ತು ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap