ಬೆಂಗಳೂರು:
ಡಿಸೆಂಬರ್ 8, 2021ರಂದು ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ 14 ಮಂದಿಯನ್ನು ಕರೆದೊಯ್ಯುತ್ತಿದ್ದಂತ ಮಿಗ್-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಡಿಸೆಂಬರ್ 8ರಂದು ಪತನಗೊಂಡಿತ್ತು. ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 11 ಮಂದಿ ವಿಧಿವಶರಾಗಿದ್ದರು.
ಈ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು, ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿರೋದಾಗಿ ಐಎಎಫ್ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
