ಯಾದಗಿರಿ
ರಸ್ತೆ ಅಪಘಾತ – ಮಾಜಿ ಸಚಿವ ರಾಜೂ ಗೌಡ ಪಾರ ಸಿಸಿಎಲ್ ಪಂದ್ಯ ಮುಗಿಸಿ ಹೈದ್ರಾಬಾದದಿಂದ ಯಾದಗಿರಿ ಮೂಲಕ ತಮ್ಮ ಊರಿಗೆ ಬರುತ್ತಿದ್ದ ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಗರದ ಗಂಜ್ ಪ್ರದೇಶದಲ್ಲಿ ಹೈವೈ ರಸ್ತೆಯಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ನೆರೆಯ ವಿಶಾಖಪಟ್ಟಣ ದಿಂದ ಸೆಲೆಬ್ರಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿ ಹಿಂತಿರುವಾಗ ಅಪಘಾತ ಸಂಭವಿಸಿದೆ ನಗರದ ಗಂಜ್ ಪ್ರದೇಶದ ಹೈವೈ ರಸ್ತೆಯಲ್ಲಿ ಟ್ರಕ್ ವೊಂದು ಇವರ ಕಾರಿಗೆ ಹಿಂದಿನಿಂದ ಗುದ್ದಿದೆ.
ಅಪಘಾತದ ರಭಸಕ್ಕೆ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿದೆ.
ಕಾರು ಸಂಪೂರ್ಣ ನುಜ್ಜು,ಗುಜ್ಜಾಗಿದ್ದು, ರಾಜೂ ಗೌಡ ಅವರಿಗೆ ಸ್ವಲ್ಪ ತರಚಿದ ಗಾಯಗಳಾಗಿವೆ.ಪ್ರಥಮ ಚಿಕಿತ್ಸೆ ಪಡೆದು ವಾಪಸ್ ಮನೆಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ಬಿಟ್ಟ ವಿಡಿಯೋದಲ್ಲಿ ಸ್ವತಃ ರಾಜೂಗೌಡ ಅವರು ತಿಳಿಸಿದ್ದಾರೆ.








